ಸಿಂದಗಿ : ಕ್ಷುಲ್ಲಕ ಕಾರಣಕ್ಕೆ ಓರ್ವನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕಡಣಿ ಗ್ರಾಮದಲ್ಲಿ ನಡೆದಿದೆ. 25 ವರ್ಷದ ಪ್ರಶಾಂತ ಕ್ಷತ್ರಿ ಹತ್ಯೆಯಾಗಿದ್ದಾನೆ. ಅಲ್ಲದೇ, ಬಸೀರ್ ಮುಲ್ಲಾ ಎಂಬಾತ ಹತ್ಯೆ ಮಾಡಿದ್ದಾನೆ. ಆದ್ರೇ, ಯಾವ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.