ವಿಜಯಪುರ : ಚಲಿಸುತ್ತಿದ್ದ ಕಾರಿಗೆ ಅಡ್ಡ ಬಂದ ಕುದುರೆಗೆ ಕಾರು ಡಿಕ್ಕಿಯಾಗಿರುವ ಪರಿಣಾಮ ಸ್ಥಳದಲ್ಲೇ ಕುದುರೆ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಬಳಿ ಸೋಮವಾರ ನಡೆದಿದೆ. ತದನಂತರ ಕಾರಿಗೆ ಹಿಂಬದಿಯಿಂದ ಬರುತ್ತಿದ್ದ ಸರ್ಕಾರಿ ಬಸ್ ಡಿಕ್ಕಿಯಾಗಿದ್ದು, ಇದರಿಂದ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಕೃಷಿ ಆಧಿಕಾರಿ ಎನ್ ಟಿ ಗೌಡರಗೆ ಗಾಯಗೊಂಡಿದ್ದಾರೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.