ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ
ಅಫಜಲಪುರ,: ಭೀಮಾ ನದಿಗೆ ತಕ್ಷಣ ನೀರು ಹರಿಸಿ ರೈತರ ಬೆಳೆಗಳನ್ನು ಉಳಿಸಬೇಕು. ಇಲ್ಲವಾದರೆ ತಾಲೂಕು ಬಂದ್, ರಾಜ್ಯ ಹೆದ್ದಾರಿ ತಡೆ ಸೇರಿದಂತೆ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದು ರೈತ ಯುವ ಮುಖಂಡ ಮಹಾಂತಗೌಡ ಪಾಟೀಲ ಗೌರ ಕರವೇ ಅಧ್ಯಕ್ಷ ಶ್ರೀಕಾಂತ ದಿವಾಣಜೀ ಎಚ್ಚರಿಕೆ ನೀಡಿದರು.
ಅವರು ಸ್ವಾಭಿಮಾನಿ ಕಬ್ಬು ಬೆಳೆಗಾರರ ಹೋರಾಟ ಸಮಿತಿ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಅಫಜಲಪುರ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದರು.
ಸರ್ಕಾರದ ನಿರ್ಲಕ್ಷ್ಯದಿಂದ ಭೀಮಾ ನದಿಯಲ್ಲಿ ನೀರಿನ ಕೊರತೆ ಉಂಟಾಗಿ ರೈತರ ಬೆಳೆಗಳು ಒಣಗುತ್ತಿವೆ. ರೈತರ ಸಂಪೂರ್ಣ ಸಾಲಮನ್ನಾ, ಬರ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಶ್ರೀಮಂತ ಬಿರಾದಾರ ರಮೇಶ ಪಾಟೀಲ,ಶಾಂತು ಅಂಜುಟಗಿ,ಶ್ರೀಕಾಂತ ದಿವಾಣಜಿ,ಗುರು ಚಾಂದಕವಟೆ,ಲತೀಪ್ ಪಟೇಲ ರಮೇಶ ಶೆಟ್ಟಿ ಸೇರಿದಂತೆ ಅನೇಕರಿದ್ದರು.
.