ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ
ಅಫಜಲಪುರ : ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ವಿಕಾಸ ವೇದಿಕೆ ವತಿಯಿಂದ ರಾಜ್ಯಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯು ಆಗಸ್ಟ್ 9ರಂದು ನಾಳೆ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು
ಯುವ ವಿಕಾಸ ವೇದಿಕೆ ಮುಖಂಡ ಹಾಗೂ ಪಾರಸ್ ಪಿಯು ಕಾಲೇಜಿನ ಪ್ರಾಂಶುಪಾಲ ರಾಜಕುಮಾರ ಬಳೂರ್ಗಿ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಭಾಗದ ವಿದ್ಯಾರ್ಥಿಗಳ ಒತ್ತಾಸೆಯಂತೆ ಅಫಜಲಪುರ ಪಟ್ಟಣದಲ್ಲಿ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಹಾಗೂ ಸಿದ್ದತೆಯ ಕ್ರಮವನ್ನು ತಿಳಿದುಕೊಳ್ಳಲು ಅನುಕೂಲವಾಗಲಿದೆ.
ಕಾರ್ಯಕ್ರಮವು ಬಡದಾಳ ತೇರಿನ ಮಠದ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು ಹಾಗೂ ಗೊಳಸಾರ ಅಭಿನವ ಪುಂಡಲಿಂಗ ಶಿವಯೋಗಿಗಳ ದಿವ್ಯ ಸಾನಿಧ್ಯದಲ್ಲಿ ಬೆಂಗಳೂರಿನ ಇನ್ಸೈಟ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಹಾಗೂ ಧಾರವಾಡದ ಸ್ಪರ್ಧಾ ಜೀನಿಯಸ್ ಅಕಾಡೆಮಿಯ ಸಂಸ್ಥಾಪಕ ಸಿದ್ದಣ್ಣ ದಳವಾಯಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕ ಎಂ.ವೈ.ಪಾಟೀಲ, ಕೆಪಿಸಿಸಿ ಹಿಂದುಳಿದ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು, ಜಿಪಂ ಮಾಜಿ ಅಧ್ಯಕ್ಷ ನಿತೀನ್ ಗುತ್ತೇದಾರ, ಶಂಕರ ಮ್ಯಾಕೇರಿ, ಶಿವಕುಮಾರ ನಾಟೀಕಾರ, ಬಸವರಾಜ ಕೊರಳ್ಳಿ, ಪ್ರಾಚಾರ್ಯ ಡಾ.ಸಂತೋಷ ಹುಗ್ಗಿ ಸೇರಿ ಸಮಾಜಸೇವಕರು, ಗಣ್ಯರು ಹಾಗೂ ರಾಜಕೀಯ ಮುಖಂಡರು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾಗುವವರಿಗೆ ಗಣ್ಯರಿಂದ ನಿಗಧಿ ಪಡಿಸಿದ ಪ್ರಥಮ ಬಹುಮಾನ 51,000, ದ್ವಿತೀಯ ಬಹುಮಾನ 25,000 ಹಾಗೂ ತೃತೀಯ ಬಹುಮಾನ 15,000 ನಿಗದಿಪಡಿಸಲಾಗಿದೆ. ಪರೀಕ್ಷೆಯ ಫಲಿತಾಂಶವನ್ನು ಅಂದೇ ಪ್ರಕಟಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಅವರು ತಿಳಿಸಿದರು.
ಪರೀಕ್ಷೆಯಲ್ಲಿ ಭಾಗವಹಿಸಲು ಈಗಾಗಲೇ 5ನೂರಕ್ಕೂ ಹೆಚ್ಚಿನ ಸ್ಪರ್ಧಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ ಆಸಕ್ತ ಅಭ್ಯರ್ಥಿಗಳು ಆಗಸ್ಟ್ 6ರೊಳಗೆ ನೂರು ರೂಪಾಯಿ ಪೋನ್ ಮಾಡುವ ಮೂಲಕ ನೋಂದಣಿ ಮಾಡಿಕೊಂಡು ಪ್ರವೇಶ ಪತ್ರ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ 9972664105, 9901800899, 8861975907 ಹಾಗೂ 6361379317 ಸಂಖ್ಯೆಗಳನ್ನು ಸಂಪರ್ಕಿಸಲು ಕೋರಿದ್ದಾರೆ.