ರಾಜ್ಯ ಸರಕಾರದಿಂದ ಕೊಬ್ಬರಿಗೆ ಕ್ವಿಂಟಾಲ್ಗೆ 1500 ರೂ. ಬೆಂಬಲ ಬೆಲೆ: ಸಿದ್ದರಾಮಯ್ಯ ಘೋಷಣೆ
Voice of Janata :Editor :ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂಪಾಯಿಯೊಂದಿಗೆ ರಾಜ್ಯ ಸರ್ಕಾರ 1500 ರೂಪಾಯಿಯನ್ನು ಹೆಚ್ಚುವರಿಯಾಗಿ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಿದ್ದಗಂಗಾ ಮಠ ಕ್ಯಾತ್ಸಂದ್ರ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಟ್ಟು ನಮ್ಮ ಸರ್ಕಾರದಿಂದ ಕೊಬ್ಬರಿ ಬೆಳೆಗಾಗಿ ಕ್ವಿಂಟಲ್ಗೆ 1500 ರೂಪಾಯಿಗಳನ್ನು ಒದಗಿಸಲಾಗುವುದು. 3000 ರೂ.ಗಳಿಗೆ ಬೇಡಿಕೆ ಇದ್ದರೂ ಸರ್ಕಾರದ ತನ್ನ ಶಕ್ತಾನುಸಾರ ಬೆಂಬಲ ಬೆಲೆ ನೀಡುತ್ತಿದ್ದು, ಎಂ.ಎಸ್.ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದು ಹೇಳಿದರು.
ರಾಜ್ಯ ಸರ್ಕಾರದಿಂದ ಹೆಚ್ಚುವರಿ ಬೆಂಬಲ : ಕೇಂದ್ರ ಸರ್ಕಾರ ನಿಗದಿ ಮಾಡಿರುವುದಕ್ಕಿಂತ ರಾಜ್ಯ ಸರ್ಕಾರವು ಕೊಬ್ಬರಿ ಬೆಳೆಗಾರರಿಗೆ 1500 ರೂಪಾಯಿಯನ್ನು ಹೆಚ್ಚಾಗಿ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.