ಅಫಜಲಪುರ: ಸಂವಿಧಾನ ಶಿಲ್ಪಿ, ಆಧುನಿಕ ಭಾರತದ ನಿರ್ಮಾತೃವಾಗಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಮೇ ೧೭ರಂದು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಅಶೋಕ ಗುಡ್ಡಡಗಿ ತಿಳಿಸಿದ್ದಾರೆ.
ಅಫಜಲಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರತಿವರ್ಷದ ಪದ್ದತಿಯಂತೆ ಡಾ. ಬಿಆರ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ, ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಸಮುದಾಯದ ಮುಖಂಡರು ಅಂಬೇಡ್ಕರ್ ಅನುಯಾಯಿಗಳು ಸೇರಿಕೊಂಡು ಜಯಂತಿ ಆಚರಣೆ ಮಾಡಲು ನಿರ್ಧರಿಸಿದ್ದೇವೆ. ಈ ಬಾರಿಯ ಕಾರ್ಯಕ್ರಮವನ್ನು ರಾಷ್ಟ್ರ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಉದ್ಘಾಟಿಸಲಿದ್ದಾರೆ. ಅಲ್ಲದೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಭೀಮರಾವ್ ಗೌರ, ನಾಗಪ್ಪ ಆರೇಕರ, ಸಿದ್ದಾರ್ಥ ಬಸರಿಗಿಡ, ಮಹಾಂತೇಶ ಬಡದಾಳ, ಸಿದ್ದು ದಿಕ್ಸಂಗಾ, ನಾಗೇಶ ಕೊಳ್ಳಿ, ನಿಂಗಪ್ಪ ಛಲವಾದಿ, ಶರಣು ಕೋಳಿಗೇರಿ, ರಾಜು ಬಬಲಾದ, ರವಿ ಗೌರ, ವಿಠ್ಠಲ್ ಸಿಂಗೆ ಸೇರಿದಂತೆ ಅನೇಕರು ಇದ್ದರು.
ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ: