ಇಂಡಿ : ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಬಾಲಕರ ಸಾವು..!
ಇಂಡಿ : ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ದೇಶಪಾಂಡೆ ತಾಂಡಾದಲ್ಲಿ ನಡೆದಿದೆ. ಇಬ್ಬರು ಬಾಲಕರು ಕೃಷಿ ಹೊಂಡದಲ್ಲಿ ಈಜಲು ಹೋಗಿದಾಗ ಈಜಲು ಬಾರದೇ ಅಮಿತ ರಾಠೋಡ(12), ಸುದೀಪ ಜಾಧವ್ (13) ಮೃತಪಟ್ಟಿರುವ ದುರ್ದೈವಿಗಳು. ಸ್ಥಳಕ್ಕೆ ಇಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಶಹರ್ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.