VOJ ನ್ಯೂಸ್ ಡೆಸ್ಕ್: ಫುಟ್ಬಾಲ್ ಪಂದ್ಯಾವಳಿಗೆ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಗ್ಯಾಲರಿ ಕುಸಿದು ಬಿದ್ದ ಪರಿಣಾಮ 200 ಮಂದಿ ಗಾಯಗೊಂಡಿದ್ದಾರೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಗ್ಯಾಲರಿಯಲ್ಲಿ ಕುಳಿತ ಕಾರಣ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮಲಪ್ಪುರಂ ಜಿಲ್ಲೆಯ ಪೂಂಗಾಡ್ ಎಂಬಲ್ಲಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 20 ಜನರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.