ಬೆಂಗಳೂರು: 2023 ಕ್ಕೆ ನಮ್ಮ ಬಲವನ್ನು ತೋರಿಸುತ್ತೇವೆ ಎಂದು ಕಾಂಗ್ರೆಸ್ ಹಾಗೂ ಬಜೆಪಿ ಪಕ್ಷದ ವಿರುದ್ಧ ಮಾಜಿ ಸಿಎಂ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ನಾವು ಯಾರ ಮನೆ ಬಾಗಿಲ ಬಳಿ ಹೋಗಲ್ಲ. ನಮ್ಮ ಮನೆ ಬಾಗಿಲಿಗೆ ಎಲ್ಲಾ ರಾಜಕೀಯ ಪಕ್ಷಗಳು ಬಂದ್ದಿದ್ದಾವೆ. ಜನರಿಗೆ ಎರಡೂ ರಾಷ್ಟ್ರೀಯ ಪಕ್ಷಗಳು ಮೋಸ ಮಾಡಿವೆ. ನಾವು ಯಾವುದೇ ಕಾರಣಕ್ಕೂ ಅತಂತ್ರವಾಗಿಲ್ಲ. ಬಿಜೆಪಿ ನಾಯಕರೇ ಕಾಂಗ್ರೆಸ್ಗೆ ಹೋಗುತ್ತಿದ್ದಾರಂತೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಕೂಡಾ ಹೀಗೆ ಇದೆ. 2023 ರ ವಿಧಾನಸಭೆ ಚುನಾವಣೆಯಲ್ಲಿ 113 ಸೀಟು ಗೆದ್ದು ತೋರಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ. ಕುಮಾರಸ್ವಾಮಿ ಹೇಳಿದ್ದಾರೆ.