2024 ಲೋಕಸಭಾ : ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ..ಯಾವ ಕ್ಷೇತ್ರದಿಂದ ಗೊತ್ತಾ..?
Editor : ಹಾಸನ : ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸಂಸದ ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಸಿದ್ದಾರೆ. 2024 ನೇ ಸಾಲಿನ ಲೋಕಸಭಾ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ಹಾಸನ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಉಪಸ್ಥಿತರಿದ್ದರು. ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ತಮ್ಮ ಉಮೇದುವಾರಿಕೆಯನ್ನು ಪ್ರಜ್ವಲ್ ರೇವಣ್ಣ ಸಲ್ಲಿಸಿದರು. ಚುನಾವಣಾಧಿಕಾರಿಯಾಗಿರುವ ಹಾಸನ ಜಿಲ್ಲಾಧಿಕಾರಿ ಅವರಿಗೆ ಪ್ರಜ್ವಲ್ ರೇವಣ್ಣ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ, ಶಾಸಕ ಸ್ವರೂಪ್ ಪ್ರಕಾಶ್ ಉಪಸ್ಥಿತರಿದ್ದರು.