ಎಸ್ಎಸ್ಎಲ್ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟ
ಬೆಂಗಳೂರು: 2025- 26ನೇ ಸಾಲಿನ ಎಸ್ಎಸ್ಎಲ್ಸಿ-2 ಪರೀಕ್ಷೆಯು ಮೇ 26 ರಿಂದ ಜೂನ್ 2ರ ವರೆಗೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ತಿಳಿಸಿದೆ. ಮಾರ್ಚ್ ತಿಂಗಳಲ್ಲಿ ನಡೆದ ಎಸ್ಎಸ್ ఎలాసి ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ವೃದ್ಧಿಸಿಕೊ ಳ್ಳಲು ಬಯಸುವವರು, ಖಾಸಗಿಯಾಗಿ ಪರೀಕ್ಷೆ ತೆಗೆದುಕೊಳ್ಳುವವರು ಮೇ 10ರ ಒಳಗಾಗಿ ನೋಂದಣಿ ಮಾಡಿಕೊಳ್ಳ ಬಹುದು. ಪರೀಕ್ಷೆ-1ರಲ್ಲಿ ಅನುತ್ತೀರ್ಣ ರಾದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷಾ ಶುಲ್ಕ ಇರುವುದಿಲ್ಲ.
ಮೇ 26: ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ).
ಮೇ 27: ಗಣಿತ ಮತ್ತು ಸಮಾಜ ಶಾಸ್ತ್ರ.
ಮೇ 28: ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ).
ಮೇ 29: ಸಮಾಜ ವಿಜ್ಞಾನ.
ಮೇ 30: ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಮತ್ತು ವೃತ್ತಿಪರ ವಿಷಯಗಳು (ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಇತರೆ).
ಮೇ 31: ರಾಜ್ಯಶಾಸ್ತ್ರ, ಹಿಂದೂಸ್ಥಾನಿ, ಕರ್ನಾಟಕ ಸಂಗೀತ.
ಜೂ. 2: ಜೆಟಿಎಸ್ ವಿಷಯಗಳು (ಎಲೆಕ್ಟಿಕಲ್, ಮೆಕ್ಯಾನಿಕಲ್ ಎಂಜಿನಿಯರಿಂಗ್, ಅರ್ಥಶಾಸ್ತ್ರ).