ಜು.೩೦ ರಂದು ಪತ್ರಿಕಾ ದಿನಾಚರಣೆಅಗ್ನಿಶಾಮಕ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಶಿಬಿರ
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಪತ್ರಿಕಾ ದಿನಾಚರಣೆಯ ನಿಮಿತ್ಯ ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್ ಸಹಯೋಗದಲ್ಲಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗೆ ಆರೋಗ್ಯ ತಪಾಸಣೆ, ಉಚಿತ ಇಸಿಜಿ ಹಾಗೂ ಆರ್.ಬಿ.ಎಸ್ ಪರೀಕ್ಷೆ ,ಹೃದಯ ರೋಗ ಕುರಿತು ಉಪನ್ಯಾಸ ಕಾರ್ಯಕ್ರಮ ಜು.೩೦ ರಂದು ಸಂಜೆ ೪ ಗಂಟೆಗೆ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದ ಪಕ್ಕದಲ್ಲಿರುವ ಅಗ್ನಿಶಾಮಕ ಠಾಣೆಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾನಿಪ ಧ್ವನಿ ಸಂಘದ ತಾಲ್ಲೂಕು ಅಧ್ಯಕ್ಷ ಶಂಕರ ಈ.ಹೆಬ್ಬಾಳ ತಿಳಿಸಿದರು.
ಪಟ್ಟಣದ ಜನರಕೂಗು ಡಿಜಿಟಲ್ ವಾಹಿನಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಅಂದು ಬೆಳಗ್ಗೆ ೯.೩೦ಕ್ಕೆ ಫಕಿರೇಶ್ವರ ಡೈಗ್ನೂಸ್ಟಿಕ್ ಸೆಂಟರ್‌ನಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಇಸಿಜಿ,ಆರ್.ಬಿ.ಎಸ್ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಸಾಯಂಕಾಲ ನಡೆಯುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮುದ್ದೇಬಿಹಾಳ ಖಾಸ್ಗತೇಶ್ವರ ಮಠದ ಉಸ್ತುವಾರಿ ಶರಣೆ ನೀಲಮ್ಮ ವಿರಕ್ತಮಠ ವಹಿಸುವರು.ವಿಜಯಪುರ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಧಿಕಾರಿ ಶಶಿಧರ ನೀಲಗಾರ ಉದ್ಘಾಟಿಸುವರು.ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಜಿಲ್ಲಾಧ್ಯಕ್ಷ ಯೂಸೂಫ ನೇವಾರ ಅಧ್ಯಕ್ಷತೆ ವಹಿಸುವರು.ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಸಾಧಕರನ್ನು ಗೌರವಿಸುವರು ಎಂದು ತಿಳಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ ಮಾತನಾಡಿ, ಕಾರ್ಯಕ್ರಮದಲ್ಲಿ ಹೃದಯ ರೋಗದ ಕಾರಣ ಪರಿಹಾರದ ಕುರಿತು ಮುದ್ದೇಬಿಹಾಳದ ಕರೇಕಲ್ ಪಾಟೀಲ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಮುಖ್ಯಸ್ಥ ಬಸನಗೌಡ ಕರೇಕಲ್‌ಪಾಟೀಲ ಅವರು ಉಪನ್ಯಾಸ ನೀಡುವರು.ಪತ್ರಕರ್ತರಾದ ಹಣಮಂತ ನಲವಡೆ, ರವಿ ತೇಲಂಗಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಪ್ರಭಾರ ತಹಸೀಲ್ದಾರ್ ಎ.ಡಿ.ಅಮರವಾದಗಿ, ಸಿಪಿಐ ಮೊಹ್ಮದ ಫಸಿವುದ್ದೀನ, ಐಎನ್‌ಬಿಸಿಡಬ್ಲೂö್ಯ ಸಂಘಟನೆ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಂಗೀತಾ ನಾಡಗೌಡ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷೆ ಕಾಶೀಬಾಯಿ ರಾಂಪೂರ, ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನ ಮುಖ್ಯಸ್ಥ ಡಾ.ಸಿ.ಕೆ. ಶಿವಯೋಗಿಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಕಾನಿಪ ಧ್ವನಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಸದಸ್ಯರಾದ ಹಣಮಂತ ನಲವಡೆ, ಮಾರುತಿ ಹಿಪ್ಪರಗಿ, ರವಿ ತೇಲಂಗಿ, ಬಸವರಾಜ ಕುಂಟೋಜಿ, ಬಸವರಾಜ ಹೂಗಾರ, ಮುತ್ತು ಕನ್ನೂರ, ವಿನಯ ಕಡ್ಲಿಮಟ್ಟಿ,ಹಣಮಂತ ಚವ್ಹಾಣ ,ಸೇರಿದಂತೆ ಉಪಸ್ಥಿತರಿದ್ದರು.