5ನೇ T20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ರೋಚಕ ಜಯ; ಸರಣಿ ಕೈ ವಶ
Voice Of Janata DesK Sports News:
ಬೆಂಗಳೂರು: ಭಾನುವಾರ, ಡಿಸೆಂಬರ್ 3ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐದನೇ ಟಿ20 ಪಂದ್ಯ ಸರಣಿಯ ಹಾಗೂ ಅಂತಿಮ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಪರಸ್ಪರ ಸೆಣಸಾಟ ಮಾಡಿವೆ.
ಹೌದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 5 ನೇ ಟಿ20 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 6 ರನ್ ಗಳ ಭರ್ಜರಿ ಜಯ ಗಳಿಸಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡಕ್ಕೆ ಭಾರತ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 161 ರನ್ ಗಳ ಗುರಿ ನೀಡಿತ್ತು.
ರನ್ ಚೇಸಿಂಗ್ ಆರಂಭಿಸಿದ ಆಸ್ಟ್ರೇಲಿಯಾ ಪರ ಆರಂಭಿಕ ಆಟಗಾರರಾದ ಟ್ರಾವಿಸ್ ಹೆಡ್ 18 ಎಸೆತಗಳಲ್ಲಿ 28 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಜೋಶ್ ಫಿಲಿಪ್ 4 ಎಸೆತಗಳಲ್ಲಿ 4 ರನ್ ಗಳನ್ನು ಗಳಿಸಿ ಔಟ್ ಆದರು. ಬಳಿಕ ಕ್ರೀಸ್ ಗೆ ಬಂದ ಬೆನ್ ಮೆಕ್ಡರ್ಮಾಟ್ 36 ಎಸೆತಗಳಲ್ಲಿ 54 ರನ್ ಗಳಿಸಿ ತಂಡ ಚೇತರಿಸಿಕೊಳ್ಳುವ ಆಟ ಆಡಿದರು.
ಕೊನೆಯ ಕ್ಷಣದವರೆಗೂ ಆಸ್ಟ್ರೇಲಿಯಾ ತಂಡಕ್ಕೆ ಜಯಗಳಿಸುವ ಸಾಧ್ಯತೆ ಇತ್ತು. ಆದರೆ ಕೊನೆಯ 2 ಓವರ್ ಗಳಲ್ಲಿ ಭಾರತೀಯ ಬೌಲರ್ ಗಳು ಆಸ್ಟ್ರೇಲಿಯಾಗೆ ಸವಾಲಾದರು. ಪರಿಣಾಮ ಭಾರತದ ಗೆಲುವಿನ ಸುಗಮವಾಗಿ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿ 6 ರನ್ ಗಳ ಅಂತರದಿಂದ ಸೋಲೊಪ್ಪಿಕೊಂಡಿತು.