ಚಡಚಣ : 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ 500 ಅಡಿ ಉದ್ದದ ತ್ರಿವರ್ಣ ಧ್ವಜವನ್ನು ಸುಮಾರು 250 ವಿದ್ಯಾರ್ಥಿಗಳೊಂದಿಗೆ ಜಾತಾ ನಡೆಸಲಾಯಿತು.
ವಿಜಯಪುರ ಜಿಲ್ಲೆಯ ನೂತನ ಚಡಚಣ ತಾಲ್ಲೂಕಿನ ದೇವರ ನಿಂಬರಗಿ ಗ್ರಾಮದ ಶ್ರೀ ಭಗವಾನ್ ಬುದ್ಧ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ರೇವಣಸಿದ್ದೇಶ್ವರ ಪ್ರೌಢಶಾಲೆಯ ಆಶ್ರಯದಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ 500 ಅಡಿ ಉದ್ದದ ತ್ರಿವರ್ಣ ಧ್ವಜವನ್ನು 250 ವಿದ್ಯಾರ್ಥಿಗಳೊಂದಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಸುತ್ತಾಡಿ ದೇಶಾಭೀಮಾನ ಸಾರಿದರು.
ಈ ಕಾರ್ಯಕ್ರಮಕ್ಕೆ ಸಂಸ್ಥೆಯ ಕಾರ್ಯದರ್ಶಿ ಅಜಿತ್ ಸಿಂಗೆ, ಗ್ರಾಮ ಪಂಚಾಯತಿ ಅಧ್ಯಕ್ಷ ಬಸವರಾಜ್ ಬಿರಾದಾರ್, ಸದಸ್ಯ ಜಾಕೀರ್ ಮನಿಯಾರ್, ಬೀರಪ್ಪ ಸಲಗರ, ಇಸ್ಮೈಲ್ ಗುಳೇಕಾರ್, ಭೀಮುಗೌಡ ಬಿರಾದಾರ್, ಬಾಬು ಗಾಡಿಗೆ, ಲೋಕಪ್ಪ ಕೆಂಗಲ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸದಾಶಿವ ಸಿಂಗೆ ಉಪಸ್ಥಿತರು.
ಇದೇ ಸಂದರ್ಬದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಶಶಿಕುಮಾರ್ ಸಿಂಗೆ ಸನ್ಮಾನಿಸಿದರು. ಶಾಲೆಯ ಮುಖ್ಯೋಪಾಧ್ಯಯ ಆರ್ ಸಿ ಬಿರಾದಾರ್ ಸ್ವಾಗತಿಸಿದರು. ಈ ಕಾರ್ಯಕ್ರಮದ ರೂವಾರಿಗಳಾದ ನಮ್ಮ ಶಾಲೆಯ ದೈಹಿಕ ಶಿಕ್ಷಕ ಪ್ರಶಾಂತ್ ಬಿರಾದಾರ, ಮತ್ತು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.