ರಾಯಚೂರು: ನಗರಸಭೆಯ ಕಲುಷಿತ ನೀರು ಕುಡಿದು ಮತ್ತೋರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಜೂನ್ 7 ರಂದು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು, ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ನಗರದ ವಾರ್ಡ್ ನಂ.12 ರ ಮಂಗಳವಾರ ಪೇಟೆ ಬಡಾವಣೆ ನಿವಾಸಿ ನಯೀಮುದ್ದೀನ್(55) ಮೃತ ವ್ಯಕ್ತಿಯಾಗಿದ್ದು, ಈ ವ್ಯಕ್ತಿ ಕಿಡ್ನಿ ಸಮಸ್ಯೆ ಉಂಟಾಗಿ ಚಿಕಿತ್ಸೆ ಪಡೆಯುತ್ತಿದ್ದ. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವು ಸಂಭವಿಸಿದೆ. ಮೊದಲು ವಾಂತಿ ಭೇದಿಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನಯೀಮುದ್ದೀನ್ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಸಿಗದೆ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಖಾಸಗಿ ಆಸ್ಪತ್ರೆಯಲ್ಲಿ 10 ದಿನ ಕಾಲ ಚಿಕಿತ್ಸೆ ಪಡೆದಿದ್ದ ವ್ಯಕ್ತಿ ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ವ್ಯಕ್ತಿಯು ಕಲುಷಿತ ನೀರು ಸೇವಿಸಿಯೇ ಮೃತ ಪಟ್ಟಿದ್ದಾನೆಂಬುದು ಮೃತನ ಕುಟುಂಬಸ್ಥರ ಆರೋಪವಾಗಿದೆ.