ಹುಬ್ಬಳ್ಳಿ: 7ನೇ ವೇತನ ಆಯೋಗ ಜಾರಿಗೆಗಾಗಿ ಮಧ್ಯಂತರ ವರದಿ ಸಿದ್ಧಪಡಿಸ್ತಾ ಇದೇವೆ. ಮಧ್ಯಂತರ ವರದಿ ಬಂದ ಕೂಡಲೇ 2023-24 ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಜೆಟ್ ನಲ್ಲಿ 7 ವೇತನ ಆಯೋಗ ಜಾರಿಗೆ ಹಣ ತೆಗೆದಿಟ್ಟಿದ್ದೇವೆ. ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿಯಿಂದ ಕಾಂಗ್ರೆಸ್ ನಾಯಕರು ಭ್ರಮ ನಿರಸನಗೊಂಡಿದ್ದಾರೆ. ಮೋದಿ ಅವರು ಬಂದ ಮೇಲೆ ಸಿಗ್ತಿರೋ ಜನ ಬೆಂಬಲದಿಂದ ಅವರು ವಿಚಲಿತಗೊಂಡಿದ್ದಾರೆ. ಅನುಭವಿ ಮಾಜಿ ಸಿಎಂ ಒಬ್ಬರು ಈ ರೀತಿ ಮಾತನಾಡೋದು ಸರಿಯಲ್ಲ. ಹಾಗಾದ್ರೆ ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟರಾ ಎಂದು ಬೊಮ್ಮಾಯಿ ಪ್ರಶ್ನಿಸಿದರು. ಅಲ್ಲದೆ, ಮಾಜಿ ಸಿಎಂ ಎಚ್.ಡಿ.ಕೆ. ರಾಜಕೀಯ ನಿವೃತ್ತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅವರದ್ದು ಇನ್ನೂ ನಿವೃತ್ತಿಯಾಗೋ ವಯಸ್ಸಲ್ಲ. ಇನ್ನೂ ಸೇವೆ ಮಾಡಬೇಕಿದೆ. ಚುನಾವಣೆ ಸಂದರ್ಭದಲ್ಲಿ ಇಂಥವೆಲ್ಲ ನಡೀತಿರುತ್ತೆ ಜನ ಪ್ರಬುದ್ಧರಾಗಿದ್ದು, ಎಲ್ಲವನ್ನೂ ಗಮನಿಸ್ತಾರೆ. ಇನ್ನೂ ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಲವಾರು ನಾಯಕರು ರಾಜ್ಯಕ್ಕೆ ಬರ್ತಾರೆ.
ದಾವಣಗೆರೆಯಲ್ಲಿ ಮಾರ್ಚ್ ನಲ್ಲಿ ರಥಯಾತ್ರೆ ಆರಂಭಿಸಲಾಗುವುದು ಎಂದರು.