ಅ – 17ಕ್ಕೆ ಇಂಡಿಯಲ್ಲಿ ಶಿಕ್ಷಕರ ದಿನಾಚರಣೆಯ ಪೂರ್ವಭಾವಿ ಸಭೆ..!
ಇಂಡಿ: ಶಿಕ್ಷಕರ ದಿನಾಚರಣೆ ನಿಮಿತ್ಯ ಬಿಇಓ, ಬಿಆರ್‌ಸಿ
ಮತ್ತು ಕಾರ್ಯಾಲಯದ ಸಿಬ್ಬಂದಿಗಳಿಗೆ ಪೂರ್ವಭಾವಿ ಸಭೆಯನ್ನು ಗುರುವಾರರಂದು ಮಧ್ಯಾಹ್ನ ೧೨-೦೦ ಗಂಟೆಗೆ ಪಟ್ಟಣದ ಗುರುಭವನದಲ್ಲಿ ಕರೆಯಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ
ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ವತಿಯಿಂದ ಸಪ್ಟೆಂಬರ್ ೫ ರಂದು ಆಚರಿಸುವ ಶಿಕ್ಷಕರ ದಿನಾಚರಣೆ ನಿಮಿತ್ತ ತಾಲೂಕಿನ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಕ್ಷಕರ ಸಂಘಟನೆಗಳ ಅಧ್ಯಕ್ಷರು ಮತ್ತು ಸರ್ವ ಪದಾಧಿಕಾರಿಗಳು, ಪ್ರಾಥಮಿಕ ಶಿಕ್ಷಕರ ಸೊಸೈಟಿಯ ಅಧ್ಯಕ್ಷರು ಮತ್ತು ಸರ್ವ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಮತ್ತು ಸರ್ವ ಪದಾಧಿಕಾರಿಗಳು (ಶಿಕ್ಷಣ ಇಲಾಖೆ), ಬೋಧಕೇತರ ಸಿಬ್ಬಂದಿಯವರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು, ಶಿಕ್ಷಣ ಪ್ರೇಮಿಗಳು ದಾನಿಗಳು ಮತ್ತು ಚಿಂತಕರು, ಇಲಾಖೆಯ ಸಿಆರ್‌ಪಿ, ಬಿಆಯ್‌ಇಆರ್‌ಟಿ, ಬಿಆರ್‌ಪಿ, ಇಸಿ ಓ, ಆದ್ದರಿಂದ ಸಭೆಗೆ ಎಲ್ಲರೂ ಆಗಮಿಸಿ ಅಗತ್ಯ ಸಲಹೆಗಳನ್ನು ನೀಡಿ ಕಾರ್ಯಕ್ರಮವನ್ನು
ಯಶಸ್ವಿಗೊಳಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ
ಟಿ ಎಸ್ ಆಲಗೂರ ಮತ್ತು ಕ್ಷೇತ್ರವಸಮನ್ವಯಾಧಿಕಾರಿ ಎಸ್. ಆರ್. ನಡಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.