ಚೆಸ್ಕಾಂ ಇಲಾಖೆ ಆವರಣದಲ್ಲಿ ಜನಸಂಪರ್ಕ ಸಭೆ
ಹನೂರು: ಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಕೆಇಬಿ) ಹನೂರು ಉಪ ವಿಭಾಗ ಕಚೇರಿ ಆವರಣದಲ್ಲಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು, ರೈತರು ಮತ್ತು ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಹೇಳಿಕೊಳ್ಳಬಹುದಾಗಿದೆ.
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು ಕಚೇರಿಯ ಅಧೀಕ್ಷಕ ಇಂಜಿನಿಯರ್ ( ವಿ) ಇವರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು, ರೈತರು ಹಾಗೂ ಗ್ರಾಹಕರು ಮತ್ತು ಸಾರ್ವಜನಿಕರು ತಮ್ಮ ವ್ಯಾಪ್ತಿಯ ವಿದ್ಯುತ್ ಸರಬರಾಜು ಸಮಸ್ಯೆಗಳ ಬಗ್ಗೆ ಪರಿಹಾರ ಪಡೆದುಕೊಳ್ಳಬೇಕೆಂದು ಹನೂರು ಸೆಸ್ಕ್ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ತಿಳಿಸಿದ್ದಾರೆ.