ವಿಜಯಪುರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..! ಡಿಸಿ ಟಿ ಭೂಬಾಲನ್
ವಿಜಯಪುರ : ಶುಕ್ರವಾರ ನಡೆಯುವ ಅಖಂಡ ಕರ್ನಾಟಕ ಬಂದ್ ಸೇರಿದಂತೆ ರಾಜ್ಯಾದ್ಯಂತ ಭಾರೀ ಚಳವಳಿ ನಡೆಸುವ ಬಗ್ಗೆ ಕನ್ನಡ ಒಕ್ಕೂಟದ ಆಶ್ರಯದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಮಹತ್ತರವಾದ ನಿರ್ಧಾರ ತೆಗೆದುಕೊಂಡಿದ್ದು ಬಂದ್ ಖಚಿತವಾಗಿದೆ.
ಆದರೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾ ಅಧಿಕಾರಿ ಟಿ. ಭೂಬಾಲನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇನ್ನೂ ಮುಂಜಾಗ್ರತಾ ಕ್ರಮವಾಗಿ ಸೂಕ್ತ ಬಿಗಿಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹಾಗೇ ಶಾಲಾ ಕಾಲೇಜು ಮತ್ತು ಸಾರಿಗೆ ವ್ಯವಸ್ಥೆ ಎಂದಿನಂತೆ ಇರುತ್ತದೆ ಎಂದು ತಿಳಿಸಿದ್ದಾರೆ.