ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಸಿದ “ಮಹಾ” ಸದಸ್ಯರು..
ವಿಜಯಪುರ : ಗಣೇಶ, ಶಿವಾಜಿ ಮಹಾರಾಜರ, ಶಾಸಕ ಯತ್ನಾಳರ ಬ್ಯಾನರ್ ಹರಿದು ಹಾಕಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ವಿಜಯಪುರ ಮಹಾನಗರ ಪಾಲಿಕೆ ಸದಸ್ಯರು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ಈದ್ ಮಿಲಾದ್ ಮೆರವಣಿಗೆ ವೇಳೆ ಬೃಹತ್ ಬ್ಯಾನರ್ನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಇದು ಖಂಡನೀಯ. ಅದಕ್ಕಾಗಿ ಕೂಡಲೇ ಬ್ಯಾನರ್ ಹರಿದ ಹಾಕಿ, ಕೋಮುಗಲಭೆ ಸೃಷ್ಟಿಸಲು ಹುನ್ನಾರ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸಿ, ಗಡಿಪಾರು ಮಾಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.