ICC world Cup 2023: ಐಸಿಸಿ ವಿಶ್ವಕಪ್ ೨೦೨೩
ಐಸಿಸಿ ವಿಶ್ವಕಪ್ 2023 : ಸಿಂಹಳಿಯರ ವಿರುದ್ದ ಶುಭಾರಂಭ ಮಾಡಿದ ಹರಿಣಗಳು..!
ದಕ್ಷಿಣ ಆಫ್ರಿಕಾದ ಬೃಹತ್ ಮೊತ್ತದ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು 44.5 ಓವರ್ಗಳಲ್ಲಿ 326 ರನ್ಗಳಿಗೆ ಆಲೌಟ್ ಆಗುವ ಮೂಲಕ 102 ರನ್ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ವಿಶ್ವಕಪ್ 2023 ಸೌತ್ ಆಫ್ರಿಕಾ ತಂಡವು ಶುಭಾರಂಭ ಮಾಡಿದೆ.
ಸೌತ್ ಆಫ್ರಿಕಾಗೆ ಭರ್ಜರಿ ಜಯ
ಸೌತ್ ಆಫ್ರಿಕಾ– 428/5 (50)
ಶ್ರೀಲಂಕಾ– 326 (44.5)
ಸೌತ್ ಆಫ್ರಿಕಾ ತಂಡಕ್ಕೆ 102 ರನ್ಗಳ ಭರ್ಜರಿ ಜಯ.
ಏಕದಿನ ವಿಶ್ವಕಪ್ನ 4ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ (100), ರಾಸ್ಸಿ ವಂಡರ್ ಡಸ್ಸೆನ್ (108) ಹಾಗೂ ಐಡೆನ್ ಮಾರ್ಕ್ರಾಮ್ (106) ಭರ್ಜರಿ ಶತಕ ಸಿಡಿಸಿ ಮಿಂಚಿದರು. ಈ ಶತಕಗಳ ನೆರವಿನಿಂದ ಸೌತ್ ಆಫ್ರಿಕಾ ತಂಡವು ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 428 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು 44.5 ಓವರ್ಗಳಲ್ಲಿ 326 ರನ್ಗಳಿಗೆ ಆಲೌಟ್ ಆಗುವ ಮೂಲಕ 102 ರನ್ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ವಿಶ್ವಕಪ್ 2023 ರಲ್ಲಿ ಸೌತ್ ಆಫ್ರಿಕಾ ತಂಡವು ಶುಭಾರಂಭ ಮಾಡಿದೆ.
ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕಗಿಸೊ ರಬಾಡ.
ಶ್ರೀಲಂಕಾ (ಪ್ಲೇಯಿಂಗ್ XI): ಕುಸಾಲ್ ಪೆರೆರಾ, ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶಾನಕ (ನಾಯಕ), ದುನಿತ್ ವೆಲ್ಲಲಾಗೆ, ಮಥೀಶ ಪತಿರಾಣ, ದಿಲ್ಶನ್ ಮಧುಶಂಕ, ಕಸುನ್ ರಜಿತ.