ICC ODI Men’s World CUP 2023: ING VD NED
Voice Of Janata DesK News : ಐಸಿಸಿ ವಿಶ್ವಕಪ್ 2023:ಪುಣೆ: ಹಾಲಿ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ಟೂರ್ನಿಯಲ್ಲಿ ಸತತ ಸೋಲುಗಳಿಂದ ಕೆಂಗೆಟ್ಟು ಟೂರ್ನಿಯಿಂದ ಹೊರಬಿದ್ದಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಕೊನೆಗೂ ಗೆಲುವಿನ ನಗೆ ಬೀರಿದ್ದು, ನೆದರ್ಲೆಂಡ್ಸ್ ತಂಡದ ವಿರುದ್ಧ 160ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಪುಣೆಯಲ್ಲಿ ಇಂದು ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 340ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ನೆದರ್ಲೆಂಡ್ಸ್ ತಂಡ 37.2 ಓವರ್ ನಲ್ಲಿ ಕೇವಲ 179 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಬರೊಬ್ಬರಿ 160ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು. ನೆದರ್ಲೆಂಡ್ ಪರ ವೆಸ್ಲಿ ಬ್ಯಾರೆಸಿ 37 ರನ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ 33 ರನ್, ನಾಯಕ ಸ್ಕಾಟ್ ಎಡ್ವರ್ಡ್ಸ್ 38 ರನ್ ಮತ್ತು ತೇಜ ನಿಡಮನೂರು ಅಜೇಯ 41ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ನಿಂದಲೂ ಉತ್ತಮ ಪ್ರದರ್ಶನ ಮೂಡಿಬರಲಿಲ್ಲ.