Voice Of Janata Desk News :SA vs AFG, ICC World Cup 2023 : ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆಫ್ಘಾನ್ ಪಡೆ ನಿಗದಿತ 50 ಓವರ್‌ಗಳಲ್ಲಿ 50 10 ವಿಕೆಟ್ ನಷ್ಟಕ್ಕೆ 244 ರನ್ ಕಲೆಹಾಕಿತು. ತಂಡದ ಪರ ಅಜ್ಮತುಲ್ಲಾ ಒಮರ್ಜಾಯ್ (97 ರನ್, 107 ಎಸೆತ, 7 ಬೌಂಡರಿ, 3 ಸಿಕ್ಸರ್) ಹೊರತುಪಡಿಸಿದರೆ, ಉಳಿದ ಯಾವೊಬ್ಬ ಬೌಲರ್ಗಳು ಕೂಡ ನಿರೀಕ್ಷಿತ ಪ್ರದರ್ಶನವನ್ನು ನೀಡಲಿಲ್ಲ.
ಹೌದು ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ನ 42ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ, ಅಫ್ಘಾನಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಗೆಲುವಿಗೆ 245 ರನ್‌ಗಳ ಗುರಿ ಪಡೆದಿದ್ದ ದಕ್ಷಿಣ ಆಫ್ರಿಕಾ 47.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.
ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್‌ನ 42ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ, ಅಫ್ಘಾನಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿತು. ಗೆಲುವಿಗೆ 245 ರನ್‌ಗಳ ಗುರಿ ಪಡೆದಿದ್ದ ದಕ್ಷಿಣ ಆಫ್ರಿಕಾ 47.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಇದು ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾದ 7 ನೇ ಗೆಲುವು. ಇದೀಗ ಈ ಗೆಲುವಿನೊಂದಿಗೆ ಆಫ್ರಿಕಾ 14 ಅಂಕಗಳೊಂದಿಗೆ, ಪಾಯಿಂಟ್ ಪಟ್ಟಿಯಲ್ಲಿ ಟೀಂ ಇಂಡಿಯಾ ನಂತರ ಎರಡನೇ ಸ್ಥಾನದಲ್ಲಿದೆ. ಈ ಸೋಲಿನೊಂದಿಗೆ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನದ ಸವಾಲು ಕೂಡ ಅಂತ್ಯಗೊಂಡಿದೆ.