ವಿಜಯಪುರ : ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕುರಿತು ಏಕವಚನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಅದಕ್ಕಾಗಿ ಕೂಡಲೇ ಎಂ.ಬಿ. ಪಾಟೀಲ ಬೇಷರತ್ ಕ್ಷಮೆಯಾಚಿಸಬೇಕು ಎಂದು ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಎಚ್ಚರಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಎಂ.ಬಿ. ಪಾಟೀಲರ ಹೆಸರು ಹೇಳದೆ ಪರೋಕ್ಷವಾಗಿ ಮಾತನಾಡಿ, ಸಚಿವ ಗೋವಿಂದ ಕಾರಜೋಳ ಬಗ್ಗೆ ಕೆಟ್ಟ ಪದಗಳನ್ನು ಬಳಸಿ ಮಾತನಾಡಿರುವುದು ದಲಿತ ಸಮುದಾಯಕ್ಕೆ ನೋವುಂಟು ಮಾಡಿದಂತಾಗಿದೆ ಎಂದರು. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕಾರಾವಧಿಯಲ್ಲಿ ಎಂ.ಬಿ. ಪಾಟೀಲ ಐದು ವರ್ಷ ಜಲ ಸಂಪನ್ಮೂಲ ಸಚಿವರಾಗಿದ್ದರು. ಆಗ ಮೇಕೆದಾಟು ಯೋಜನೆ ಏಕೆ ಮಾಡಲಿಲ್ಲ. ಜಿಲ್ಲೆಯ ಕಾಂಗ್ರೆಸ್ ನಾಯಕ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ. ಅದಕ್ಕಾಗಿ ಎಂಬಿಪಿ ಕ್ಷಮೆಯಾಚನೆ ಮಾಡಬೇಕು ಎಂದರು.