ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಅನನ್ಯ : ಸಂತೋಷ ಬಂಡೆ
ಇಂಡಿ: ಭಾರತೀಯ ಶಿಲ್ಪಕಲೆಗೆ ಜಕಣಾಚಾರಿ ಅವರ
ಕೊಡುಗೆ ಅನನ್ಯ. ಕನ್ನಡ ಶಿಲ್ಪಕಲೆಯ ಪರಂಪರೆಯನ್ನು ಶ್ರೀಮಂತಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರು ಬೇಲೂರು ಹಳೆಬೀಡಿನಲ್ಲಿ ಕಲ್ಲಿನಿಂದ ಶಿಲ್ಪಕಲೆಯನ್ನು ಕೆತ್ತಿ ಇಡೀ ವಿಶ್ವವೇ ವೀಕ್ಷಿಸುವಂತೆ ಮಾಡಿದ್ದಾರೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಸೋಮವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕವು ಶಿಲ್ಪಕಲೆಯ ತವರೂರು. ಬೇಲೂರು, ಹಳೆಬೀಡು, ಸೋಮನಾಥಪುರ ಮತ್ತಿತರ ಕಡೆಗಳಲ್ಲಿ ಕೆತ್ತಿರುವ ಅಮರಶಿಲ್ಪಿ ಜಕಣಾಚಾರಿ ಅವರ ಶ್ರೇಷ್ಠ ಕೆತ್ತನೆಗಳೇ ಇದಕ್ಕೆ ಸಾಕ್ಷಿ. ಸಾಹಿತ್ಯ, ಸಂಗೀತ, ನಾಟ್ಯ, ವಾಸ್ತುಶಿಲ್ಪವು ಭಾರತೀಯ ಸಂಸ್ಕøತಿಯ ಪ್ರತೀಕ. ವಾಸ್ತುಶಿಲ್ಪ ಕಲೆಯನ್ನು ಅಜರಾಮರಗೊಳಿಸಿದ ಕೀರ್ತಿ ಜಕಣಾಚಾರಿ ಅವರಿಗೆ ಸಲ್ಲುತ್ತದೆ. ಹಾಗಾಗಿ ಅವರನ್ನು ಸ್ಮರಿಸುವುದು, ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಶಿಕ್ಷಕ ಎಸ್.ಎಸ್. ಅರಬ ಮಾತನಾಡಿ, ನಾಡಿನ ಐತಿಹಾಸಿಕ ವಾಸ್ತುಶಿಲ್ಪ ಪರಂಪರೆಗೆ ಶಿಲ್ಪಗಳ ಕೊಡುಗೆ ಅಪಾರವಾದುದು. ಅಂತಹ ಶಿಲ್ಪಕಲೆಯ ಕೊಡುಗೆಯನ್ನು ತನ್ನ ಕಲಾ ಕೌಶಲ್ಯದ ಮೂಲಕ ನಾಡಿಗೆ ನೀಡಿ ಅಜರಾಮರನಾದವನು ಅಮರಶಿಲ್ಪಿ ಜಕಣಾಚಾರಿ ಎಂದು ಹೇಳಿದರು.
ಶಾಲಾ ಮುಖ್ಯ ಶಿಕ್ಷಕ ಎ.ಎಂ. ಬೆದ್ರೇಕರ ಅಧ್ಯಕ್ಷತೆ ವಹಿಸಿ
ಮಾತನಾಡಿ, ನಾಡಿನ ಇತಿಹಾಸದಲ್ಲಿ ಹೊಯ್ಸಳರು ತಮ್ಮದೇ ಆದ ಕೊಡುಗೆಯನ್ನು ಶಿಲ್ಪಕಲೆಗೆ ನೀಡಿದ್ದಾರೆ.
ವಿಷ್ಣುವರ್ಧನ ಕಾಲದಲ್ಲಿ ಕಲೆಯು ಉತ್ತುಂಗ
ಶಿಖರದಲ್ಲಿತ್ತು. ಇತಿಹಾಸದ ಗತಕಾಲದಲ್ಲಿ ಬೇಲೂರು,
ಹಳೇಬೀಡು, ಚನ್ನಕೇಶವ ದೇವಾಲಯ ಇನ್ನೂ
ಅನೇಕ ಕಡೆ ಅಮರಶಿಲ್ಪ ಜಕಣಾಚಾರಿಯವರು ಶಿಲ್ಪ
ಕಲೆಗಳನ್ನು ಕೆತ್ತನೆ ಮಾಡಿ ಹೆಸರುವಾಸಿಯಾಗಿ,
ಅಮರಶಿಲ್ಪಿ ಎನಿಸಿಕೊಂಡಿದ್ದಾರೆ ಎಂದು ಹೇಳಿದರು.
ಶಿಕ್ಷಕಿ ಎಸ್.ಪಿ. ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಾಗವಹಿಸಿದ್ದರು.
ಇಂಡಿ: ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್
ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವಕರ್ಮ ಅಮರಶಿಲ್ಪಿ
ಜಕಣಾಚಾರಿ ಸಂಸ್ಮರಣಾ ದಿನವನ್ನು ಉದ್ದೇಶಿಸಿ ಸಂತೋಷ ಬಂಡೆ ಮಾತನಾಡಿದರು.