ಶಕ್ತಿ ಯೋಜನೆ ಎಪೆಕ್ಟ್: ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ಕಲ್ಪಿಸಿ ; ಮಾಜಿ ಮುಖ್ಯಮಂತ್ರಿ ಎಚ್ ಡಿ ಕೆ
Voice Of Janata : ಶಕ್ತಿ ಯೋಜನೆಯಿಂದ ಶಾಲಾ ಮಕ್ಕಳಿಗೆ ಸಂಕಷ್ಟ ಎದುರಾಗಿದ್ದು, ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವಿಟ್ಟರ್‌ನಲ್ಲಿ ಶಾಲಾ ಮಕ್ಕಳು ಪ್ರಯಾಸದಿಂದ ಬಸ್ ಹತ್ತುತ್ತಿರುವ ವಿಡಿಯೋ ಒಂದನ್ನು ಟ್ಯಾಗ್ ಮಾಡಿರುವ ಅವರು ಶಕ್ತಿ ಯೋಜನೆಯಿಂದ ಉಂಟಾದ ಸಂಕಷ್ಟಗಳ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.


















