ವಿಶ್ವ ಕೌಶಲ್ಯ ಸ್ಪರ್ಧೆಗೆ ನೊಂದಾಯಿಸಲು ಆಹ್ವಾನ
ವಿಜಯಪುರ : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು (ಕೆ.ಎಸ್.ಡಿ.ಸಿ) ವತಿಯಿಂದ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸಲಾಗತ್ತಿದ್ದು, ಈ ಸ್ಪರ್ಧೆಯಲ್ಲಿ 57 ವಿವಿಧ ಕೌಶಲ್ಯಗಳಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ನೋಂದಣಿ ಪ್ರಕ್ರಿಯೆ ಆರಂಭಿಸಿದೆ.
ಈ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಜಿಲ್ಲೆ, ವಿಭಾಗ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ನಡೆಯುವುದು. ರಾಷ್ಟ್ರ ಮಟ್ಟದಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಕೇಂದ್ರ ಸರಕಾರ ವತಿಯಿಂದ 2024 ರಲ್ಲಿ ಪ್ರಾನ್ಸಿನ ಲಿಯೋನ್‌ನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅಭ್ಯರ್ಥಿಗಳು ಜನವರಿ 07 -2024
www.skillindiadigital.gov.in
ನೊಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ವಿಜಯಪುರ ಕಛೇರಿ ದೂರವಾಣಿ ಸಂಖ್ಯೆ: 08352-297019 ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


















