ನಾಳೆ ಕೆ-ಸೆಟ್ ಪರೀಕ್ಷೆ: 1.17 ಲಕ್ಷ ಅಭ್ಯರ್ಥಿಗಳು
ಜ- 13 K- Set ಪರೀಕ್ಷೆ, ಪರೀಕ್ಷಾ ಕೇಂದ್ರಗಳು ಮತ್ತು ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಸಂಖ್ಯೆ ಎಷ್ಟು..?
Voice Of Janata : Editor : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪ ಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಶನಿವಾರ (ಜ.13) ನಡೆಯಲಿದ್ದು, ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ವಿವಿಧ ರೀತಿಯ 41 ವಿಷಯಗಳಿಗೆ ಪರೀಕ್ಷೆ ನಡೆಯುತ್ತಿದ್ದು ಒಟ್ಟು 1,17,302 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಬೆಂಗಳೂರು, ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮ ಕೂರು, ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರ ತೆರೆದಿದ್ದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಕ್ಕೆ 2 ಗಂಟೆ ಮೊದಲೇ ಬರಬೇಕು ಎಂದು ಪ್ರಾಧಿಕಾರ ತಿಳಿಸಿದೆ.