ಜಿ.ಪಂ. ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ರೀಷಿ ಆನಂದ ಅಧಿಕಾರ ಸ್ವೀಕಾರ
ವಿಜಯಪುರ: ಜಿಲ್ಲಾ ಪಂಚಾಯತಿಯ ನೂತನ ಮುಖ್ಯಕಾರ್ಯನಿರ್ವಹಣಾಧಿಕಾರಿಯ ಋಷಿ ಆನಂದ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಹುಲ್ ಶಿಂಧೆ ಅವರು ಬೆಳಗಾವಿ ಜಿಲ್ಲೆಗೆ ವರ್ಗಾವಣೆ – ಗೊಂಡಿರುವುದರಿಂದ ವಿಜಯಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹುದ್ದೆಗೆ ಋಷಿ ಆನಂದ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.
ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹುದ್ದೆಗೆ ವರ್ಗಾವಣೆಗೊಂಡು ಆಗಮಿಸಿದ ಋಷಿ ಆನಂದ ಅವರನ್ನು ನಿರ್ಗಮಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ – ಕಾರ್ಯದರ್ಶಿ ಡಾ.ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠ ಸೇರಿದಂತೆ ಜಿಲ್ಲಾ ಪಂಚಾಯತಿಯ ವಿವಿಧ ಅಧಿಕಾರಿಗಳು, ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.