ಅಫಜಲಪುರ: ಮಕರ ಸಂಕ್ರಮಣದ ಅಂಗವಾಗಿ ರಾಜ್ಯದ ಪ್ರತಿಯೊಂದು ಹಳ್ಳಿಗಳಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಚತಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಂತೆ ತಾಲೂಕಿನ ಮಣ್ಣೂರ ಗ್ರಾಮದ ಶ್ರೀ ಯಲ್ಲಮ್ಮ ದೇವಸ್ಥಾನವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಸದಸ್ಯರು ಪದಾಧಿಕಾರಿಗಳು ಸ್ವಚ್ಛಗೊಳಿಸಿದರು.

ಈ ಸಂದರ್ಭದಲ್ಲಿ ಯಲ್ಲಮ್ಮ ದೇವಿ ಟ್ರಸ್ಟ್ ನ ಕಾರ್ಯದರ್ಶಿ ಕಲ್ಲಪ್ಪ ಬೇನೂರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ಅನೀಲ ದಾವಣೆ, ತಮ್ಮಣ್ಣ ಪೂಜಾರಿ,ಒಕ್ಕೂಟದ ಅಧ್ಯಕ್ಷೆ ಲಕ್ಷ್ಮಿ ಬಾಕೆ ಸೇವಾ ಪ್ರತಿನಿಧಿಗಳಾದ ವಿದ್ಯಾವತಿ, ಸುಜಾತಾ ಬೌರಮ್ಮ, ಸೇರಿದಂತೆ ಸ್ವಸಹಾಯ ಸಂಘದ ಸದಸ್ಯರಿದ್ದರು.



















