ಶಕ್ತಿ ಯೋಜನೆ ಸಕಾರ : ಪ್ರಶಸ್ತಿ ಪುರಸ್ಕಾರ
Voice Of Janata: Editor : ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ‘ಶಕ್ತಿ’ ಸಾಕಾರಗೊಂಡ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ.ಗೆ ಪ್ರಶಸ್ತಿಗಳೊಂದಿಗೆ ಸತ್ಕಾರ ಸಿಗುತ್ತಿದೆ. ಇದೀಗ ಶಕ್ತಿಯ ಯಶಸ್ಸಿನ ಕಾರಣಕ್ಕಾಗಿ ಸ್ಕಾಚ್ ಸಾಲಿನ 2 ರಾಷ್ಟ್ರೀಯ ಪುರಸ್ಕಾರಗಳು ಕೆ.ಎಸ್. ಆರ್.ಟಿ.ಸಿ.ಗೆ ಲಭಿಸಿವೆ.
ದೆಹಲಿ ಮೂಲದ ಸ್ಕಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಆಳದಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಥಾಜ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ ಕೆ.ಎಸ್.ಆರ್.ಸಿ. ನಿಗಮವು ಕರ್ನಾಟಕದ ಮಹಿಳೆಯರಿಗಾಗಿ ಜಾರಿಗೊಳಿಸಿರುವ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಯ ಪರಿಣಾಮಕಾರಿ ಅನುಷ್ಠಾನಕ್ಕೆ ಹಾಗೂ ವಿನೂತನ ಕಾರ್ಮಿಕ , 1023 02 ಲಭಿಸಿವೆ. ಪ್ರಶಸ್ತಿ ಪ್ರಧಾನ ಸಮಾರಂಭವು 2024ರ ಫೆಬ್ರವರಿ 19ರಂದು ದೆಹಲಿಯ ಕಾನ್ಸಿಟ್ಯುಷನ್ ಕ್ಲಬ್ ಆಫ್ ಇಂಡಿಯಾ ದಲ್ಲಿ ನೆರೆವೆರಿಯಲಿದೆ.