ಶೀಲ ಶಂಕಿಸಿ ಪತ್ನಿಯ ಕೊಲೆ, ಗಂಡನಿಗೆ ಶಿಕ್ಷೆ..!
ವಿಜಯಪುರ : ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ವಿಜಯಪುರ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಶರಣಸೋಮನಾಳ ಗ್ರಾಮದ ಮೈಬೂಬಾಷಾ ಮಕಾಂದಾರ ಶಿಕ್ಷೆಗೆ ಗುರಿಯಾಗಿದ್ದಾನೆ. 2022 ಜನವರಿ. 11 ರಂದು ಪತ್ನಿ ಬಿಸ್ಮಿಲ್ಲಾಳ ನಡತೆ ಶಂಕಿಸಿ ಜಗಳ ಕಾಯ್ದಿದ್ದಲ್ಲದೇ ರಾತ್ರಿ ಮಲಗಿದ್ದಾಗ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದನು.
ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಧೀಶರಾದ ಸುಭಾಸ ಸಂಕದ ಅವರು, ಮೈಬೂಬಾಷಾಗೆ ಶಿಕ್ಷೆ ವಿಧಿಸಿದ್ದಾರೆ. ಸಿಪಿಐ ಬಿ.ಎಂ. ಪಾಟೀಲ ಪ್ರಕರಣದ ತನಿಖೆ ನಡೆಸಿದ್ದರು. ಸರ್ಕಾರಿ ಅಭಿಯೋಜಕಿ ವಿ.ಎಸ್. ಇಟಗಿ ವಾದ ಮಂಡಿಸಿದ್ದರು.