ಇಂಡಿಯಾ ಮೈತ್ರಿ ಕೂಟದಲ್ಲಿ ಬಿರುಕು ।
42 ಕ್ಷೇತ್ರಗಳಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ |
ರಾಹುಲ್ ಮಾತೇ ಮುಳುವಾಯ್ತ?
Voice Of Janata DesK : Political News : New Delhi :ಟಿಎಂಸಿ ನಾಯಕಿ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನೀಡಿದ ಹೇಳಿಕೆಯೊಂದು ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟದಲ್ಲಿ ಆಘಾತ ನೀಡಿದೆ. ಬಂಗಾಳದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಇಲ್ಲ. ರಾಜ್ಯದ ಎಲ್ಲ 42 ಕ್ಷೇತ್ರಗಳಲ್ಲೂ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಆದಾಗ್ಯೂ, ಟಿಎಂಸಿ ಇಂಡಿಯಾ ಕೂಟದ ಭಾಗವಾಗಿದೆ ಎಂದು ಬ್ಯಾನರ್ಜಿ ಅವರು ಹೇಳಿಕೆ ನೀಡಿದ್ದಾರೆ.
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತೇನೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಈ ಮೂಲಕ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವುದನ್ನು ತಂತ್ರಗಾರಿಕೆ ರೂಪಿಸುತ್ತಿರುವ ಬೆನ್ನಲ್ಲೇ ಹಂಚಿಕೆ ಕುರಿತಂತೆ ಒಡಕು ಮೂಡಿರುವ ಹಿನ್ನೆಲೆಯಲ್ಲಿ ಇಂಡಿಯಾ ಮೈತ್ರಿ ಕೂಟದಲ್ಲಿ ಬಿರುಕು ಕಾಣಿಸಿಕೊಂಡಿದೆ.
ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಿಗೆ ಏಕಾಂಗಿ ಸ್ಪರ್ಧಿಸುತ್ತೇವೆ. ಈ ಮೂಲಕ ಇಂಡಿಯಾ ಮೈತ್ರಿ ಕೂಟದ ಜೊತೆ ಎಲ್ಲಾ ಹೊಂದಾಣಿಕೆಗಳನ್ನು ಮಮತಾ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು ‘ನನಗೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ… ನಾವು ಏಕಾಂಗಿಯಾಗಿ ಹೋರಾಡುತ್ತೇವೆ, ಚುನಾವಣೆಯ ನಂತರ ಅಖಿಲ ಭಾರತ ಮಟ್ಟದಲ್ಲಿ ಸೀಟು ಹಂಚಿಕೆ ಒಪ್ಪಂದದ ಬಗ್ಗೆ ತೀರ್ಮಾನಿಸುತ್ತೇವೆ’ ಎಂದು ಬಂಗಾಳ ಮುಖ್ಯಮಂತ್ರಿ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಅವರ ‘ಭಾರತ್ ಜೋಡೋ ನ್ಯಾಯ ಯಾತ್ರೆಯ ಕುರಿತು ಕಿಡಿಕಾರಿದ್ದಾರೆ.
ಭಾರತ್ ಜೋಡೋ ನ್ಯಾಯ ಯಾತ್ರೆ ನನ್ನ ರಾಜ್ಯಕ್ಕೆ ಬರುತ್ತಿರುವ ಕುರಿತು ಕಾಂಗ್ರೆಸ್ ಯಾವುದೇ ಮಾಹಿತಿಯನ್ನು ನೀಡಿಲ್ಲ, ಸೌಜನ್ಯಕ್ಕಾದರೂ ನನಗೆ ತಿಳಿಸುವ ಆಲೋಚನೆ ಅವರಿಗಿರಲಿಲ್ಲ…’ ಎಂದು ಮಮತಾ ಹೇಳಿದರು.
ನಾನು ಅವರಿಗೆ ನೀಡಿದ ಎಲ್ಲ ಪ್ರಸ್ತಾವನೆಗಳನ್ನೂ ಅವರು ತಿರಸ್ಕರಿಸಿದ್ದಾರೆ. ಹೀಗಾಗಿ ನಾವು ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯ ವಿರುದ್ಧ ಐಕ್ಯತಾ ರಂಗವನ್ನು ರಚಿಸುವ ವಿರೋಧ ಪಕ್ಷಗಳ ಪ್ರಯತ್ನಕ್ಕೆ ಮಮತಾ ಬ್ಯಾನರ್ಜಿ ನಿರ್ಧಾರದಿಂದ ತೀವ್ರ ಧಕ್ಕೆಯಾದಂತಾಗಿದೆ.
ಕಾಂಗ್ರೆಸ್ ಜೊತೆ ಇನ್ನು ಮುಂದೆ ಯಾವುದೇ ಸಂಬಂಧವಿಲ್ಲ. ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ. ಫಲಿತಾಂಶ ಪ್ರಕಟಗೊಂಡ ಬಳಿಕ ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಯಾವ ಪಕ್ಷದ ಜೊತೆ ಕೈ ಜೋಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಸೀಟು ಹಂಚಿಕೆ ಒಪ್ಪಂದ ಕುರಿತಂತೆ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರ ಜೊತೆಗೂ ನಡೆಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.