ವಿದ್ಯುತ್ ಸೇವೆಗಳು ಮತ್ತು ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ.
ಹನೂರು: ಹನೂರು ಉಪ ವಿಭಾಗ ವ್ಯಾಪ್ತಿಯ ಕೌದಳ್ಳಿ ಹಾಗೂ ರಾಮಾಪುರ ಶಾಖ ಕಚೇರಿಯ ಆವರಣದಲ್ಲಿ ಫೆ. 16 ರಂದು ವಿದ್ಯುತ್ ಸೇವೆಗಳು ಮತ್ತು ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ವಿದ್ಯುತ್ ಗ್ರಾಹಕರಿಗೆ ಹಾಗೂ ಸಾರ್ವಜನಿಕರಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ಕೋರಲಾಗಿದೆ.
ಹನೂರು ತಾಲೂಕಿನ ಕೌದಳ್ಳಿ ಶಾಖ ಕಚೇರಿ ಆವರಣದಲ್ಲಿ ಬೆಳಿಗ್ಗೆ 10:00 ಗಂಟೆಗೆ ಆರಂಭವಾಗುತ್ತದೆ. ಹಾಗೂ ಮಧ್ಯಾಹ್ನ 3:00ಗೆ ರಾಮಾಪುರ ಕಚೇರಿ ಆವರಣದಲ್ಲಿ ಕಾರ್ಯಕ್ರಮ ಆರಂಭವಾಗುತ್ತದೆ ಎಂದು ಸಹಾಯಕ ಕಾರ್ಯವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ.
ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ.