ವಿಜಯಪುರ | ಕಾಲುವೆಗಳಿಗೆ ನೀರು :ನಿಷೇಧಾಜ್ಞೆ ಜಾರಿ
ವಿಜಯಪುರ: ಆಲಮಟ್ಟಿ ಜಲಾಶಯದಿಂದ ಫೆ. 19ರಿಂದ ಮಾರ್ಚ 10ರವರೆಗೆ ಮುಳವಾಡ ಏತ ನೀರಾವರಿಯ ಹಾಗೂ ಚಿಮ್ಮಲಗಿ ಏತ ನೀರಾವರಿ ಕಾಲುವೆ ವ್ಯಾಪ್ತಿಯ 96 ಕೆರೆಗೆಳಿಗೆ 1.8 ಟಿಎಂಸಿ ನೀರು ಕುಡಿಯುವ ಉದ್ದೇಶಕ್ಕಾಗಿ ನೀರು ಹರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಾಲುವೆಗಳ ಎಡ-ಬಲ 100 ಅಡಿ ವ್ಯಾಪ್ತಿಯಲ್ಲಿ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.