ಸಂಸದ ಬೆಂಬಲಿಗ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಬರ್ಬರ್ ಕೊಲೆ
ಕಲ್ಬುರ್ಗಿ : ಸಂಸದ ಉಮೇಶ್ ಜಾಧವ್ ಬೆಂಬಲಿಗ ಗಿರೀಶ್ ಚಕ್ರ ಬರ್ಬರ ಹತ್ಯೆ ಸಂಸದ ಡಾ. ಉಮೇಶ್ ಜಾಧವ್ ಬೆಂಬಲಿಗ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಅವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ನಡೆದಿದೆ. ಗಿರೀಶ್ ಅವರನ್ನು ಬಿಎಸ್‌ಎನ್‌ಎಲ್ ಸಲಹಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ ಹಿನ್ನಲೆಯಲ್ಲಿ ಪಾರ್ಟಿ ಕೊಡಿಸುವುದಾಗಿ ಸ್ನೇಹಿತರು ಜಮೀನಿಗೆ ಕರೆದೊಯ್ದು ಹತ್ಯೆ ನಡೆಸಿದ್ದಾರೆ.
ಈ ಹಿನ್ನೆಲೆ ಪಾರ್ಟಿ ಕೊಡುವುದಾಗಿ ನಂಬಿಸಿ ಗಿರೀಶ್ ಚಕ್ರ ಅವರನ್ನು ಸ್ನೇಹಿತರೇ ಜಮೀನಿಗೆ ಕರೆಸಿದ್ದರು. ಅದರಂತೆ ಜಮೀನಿಗೆ ಬಂದ ಗಿರೀಶ್ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಗಾಣಗಾಪುರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.



















