ಗುಡುಗು, ಸಿಡಿಲು ಬಡಿತದಿಂದ ಮುನ್ನೆಚ್ಚರಿಕೆ ವಹಿಸಿ : ಎಸಿ ಅಬೀದ್ ಗದ್ಯಾಳ
Voice Of Janata DESK NEWS : ಮೇ 16: ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಲಹೆ ಸೂಚನೆಗಳನ್ನು ನೀಡಿದ್ದು, ಅವನ್ನು ಪಾಲಿಸುವಂತೆ ರಾಜ್ಯ ಸರಕಾರವು ಸುತ್ತೋಲೆಯನ್ನು ಹೊರಡಿಸಿದೆ ಎಂದು ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರು ತಿಳಿಸಿದ್ದಾರೆ.
ಈಗಾಗಲೇ ಬೆಳಗಾವಿ ಬಾಗಲಕೋಟ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಗುಡುಗು, ಮಿಂಚು ಸಿಡಿಲು ನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಹಾಗಾಗಿ ಇಂಡಿ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಹಾಗೂ ಸಾರ್ವಜನಿಕರು ಪಾಲಿಸಬೇಕಾದ ನಿಯಾಮವಳಿಗಳನ್ನು ಸರಕಾರ ಸುತ್ತೊಲೆಯಲ್ಲಿ ತಿಳಿಸಿದ್ದು, ಅದರಂತೆ ಎಲ್ಲರೂ ಅಗತ್ಯವಾಗಿ ಪಾಲನೆ ಮಾಡಬೇಕು ಎಂದು ತಿಳಿಸಿದರು.
ಸಿಡಿಲಿಗೆ ಸಾಮಾನ್ಯವಾಗಿ ತುತ್ತಾಗುವ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಆಸ್ತಿ ಅಥವಾ ಮೂಲ ಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸಬೇಕು. ಸ್ಥಳೀಯ ಜನರನ್ನು ಎಚ್ಚರಿಸಲು ಹಾಗೂ ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲು ಶಾಲೆ, ಕಾಲೇಜು, ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಸಮುದಾಯ ಕೇಂದ್ರಗಳಲ್ಲಿ ವ್ಯಾಪಕ ತಿಳುವಳಿಕೆ ಹಾಗೂ ಮಾಹಿತಿಯನ್ನು ನೀಡಬೇಕು ಎಂದು ಸೂಚಿಸಿದೆ.
ಗುಡುಗು ಮತ್ತು ಸಿಡಿಲಿನ ಸಂದರ್ಭದಲ್ಲಿ ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಬೇಕು. ವಾಹನ ಚಾಲನೆಯಲ್ಲಿದ್ದರೆ, ತಕ್ಷಣವೇ ವಾಹನ ನಿಲ್ಲಸಿ ವಾಹನದಲ್ಲೇ ಆಶ್ರಯ ಪಡೆಯಬೇಕು ಎಂದು ತಿಳಿಸಿದೆ.
ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬಹುದು? ಇಲ್ಲಿದೆ ಸಲಹೆ
ಕರ್ನಾಟಕದ ಹಲವು ಭಾಗಗಳಲ್ಲಿ ಸಾಮಾನ್ಯವಾಗಿ ಮುಂಗಾರುಪೂರ್ವದಲ್ಲಿ ಹಾಗೂ ಮುಂಗಾರಿನ ಸಂದರ್ಭದಲ್ಲಿ ಗುಡುಗು – ಸಿಡಿಲು ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು – ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಕೈಗೊಳ್ಳಬೇಕಾದ ಅಥವಾ ಅನುಸರಿಸಬೇಕಾದ ಕ್ರಮಗಳನ್ನು ಇಲ್ಲಿ ನೀಡಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ಉಲ್ಲೇಖಿಸಿದೆ.
- ಗುಡುಗು, ಸಿಡಿಲಿನ ಸ೦ದರ್ಭದಲ್ಲಿ ಏನು ಮಾಡಬೇಕು? ಹೊರಗೆ ಹೋಗುವ ಅನಿವಾರ್ಯತೆ ಇದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನೆಚ್ಚರಿಕೆಗಳನ್ನು ಮೊಬೈಲ್‌ನಲ್ಲಿ ಗಮನಿಸಿಸುವುದು.
- ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಕೇತ್ರದಲ್ಲಿ ಕಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು.
- ಗುಡುಗು-ಸಿಡಿಲಿನ ಸ೦ದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯುವುದು.
- ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು.
- ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿ೦ದ ದೂರವಿರುವುದು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸ೦ಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು.
- ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅ೦ತರವನ್ನು ಕಾಯ್ದುಕೊಳ್ಳುವುದು.
- ಗುಡುಗು ಮತ್ತು ಸಿಡಿಲು ಸ೦ದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ತಿತ ಸ್ಥಳದಲ್ಲಿ ಆಶ್ರಯ ಪಡಯಲು ಸಾಕಷ್ಟು ಸಮಯವಿಲ್ಲದಿದ್ದರೆ, ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.
- ವಿದ್ಯುತ್ ಅಥವಾ ಟಿಲಿಫೋನ್ ಕ೦ಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡಯಬಾರದು, ಇವು ಮಿಂಚನ್ನು ಆಕರ್ಷಿಸುತ್ತವೆ.
- ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕಳಗೆ ಆಶ್ರಯ ಪಡಯುವುದು.
- ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕ೦ಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿ೦ದ ದೂರವಿರುವುದು.
- ಸಿಡಿಲು ಸ೦ದರ್ಭದಲ್ಲಿ ಮೊಬೈಲ್ ಫೋನ್ಗಳನ್ನು ಬಳಸಬಾರದು.
- ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.
- ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ, ಬೆ೦ಕಿ ಮತ್ತು ವಿದ್ಯುತ್ ಶಕ್ತಿ ಸ೦ಪರ್ಕದಿಂದ ದೂರವಿರುವುದು.
- ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.
- ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕುವುದು.
- ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ, ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಅಥವಾ ಶವರ್ ತೆಗೆದುಕೊಳ್ಳಬಾರದು, ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಹೊಗೆಯಬಾರದು.
- ವಿದ್ಯುತ್ ಸ೦ಪರ್ಕ ಹೊಂದಿರುವ ದೂರವಾಣಿಯನ್ನು ಬಳಸಬಾರದು.
- ಗುಡುಗು – ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಮರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡುವುದು ಉತ್ತಮ.
- ಗುಡುಗು ಸಿಡಿಲಿನ ಸಮಯದಲ್ಲಿ, ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳ ಸಂಚಾರವನ್ನು ಮಾಡದಿರುವುದು ಒಳ್ಳೆಯದು.