Voice of Janata: ಲೋಕಸಭಾ ಚುನಾವಣೆ : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯ ಲಿದ್ದು, ಒಟ್ಟು 2.59 ಕೋಟಿ ಮತ ದಾರರು ಒಟ್ಟು 227 ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲಿದ್ದಾರೆ.
ಕರ್ನಾಟಕದ ಯಾವ ಯಾವ ಜಿಲ್ಲೆಯಲ್ಲಿ ಎರಡನೇ ಹಂತದ ಮತದಾನ..!
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಎಲ್ಲ 14 ಕ್ಷೇತ್ರಗಳಲ್ಲಿ ಸದ್ಯ ಬಿಜೆಪಿ ಸಂಸದರಿದ್ದು, ಎಲ್ಲ ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದ್ದರೆ, ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ಕಾಂಗ್ರೆಸ್ ಹೊಂದಿದೆ.
ಒಂದೂವರೆ ತಿಂಗಳಿಂದ ರಣ ಬಿಸಿಲನ್ನು ಲೆಕ್ಕಿಸದೆ ರಾಜಕೀಯ ಪಕ್ಷಗಳು ಭರ್ಜರಿಯಾಗಿ ಮತ ಬೇಟೆ ನಡೆಸಿದ್ದು, ಉತ್ತಮ ಫಸಲಿನ ನಿರೀಕ್ಷೆಯಲ್ಲಿವೆ. ಮತದಾರರನ್ನು ಸೆಳೆಯಲು ಎಲ್ಲ ತಂತ್ರಗಾರಿಕೆ, ರಾಜಕೀಯ ಪಟ್ಟುಗಳನ್ನು ಬಳ ಸಿದ ಬಿಜೆಪಿ ಹಾಗೂ ಕಾಂಗ್ರೆಸ್ ಅಂತಿಮವಾಗಿ ಮತದಾರರನ ಮೇಲೆ ಭಾರ ಹಾಕಿದ್ದಾರೆ.