ಲೋಕಸಭಾ ಚುನಾವಣೆ ಯಶಸ್ವಿ : ಎಸಿ ಅಬೀದ್ ಗದ್ಯಾಳ ಅವರಿಗೆ ಜಿಲ್ಲಾ ಆಡಳಿತ ಸನ್ಮಾನ
ವಿಜಯಪುರ : ಜೂ.06: 2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತಕ್ಕೆ ಒಳ್ಳೆಯ ಹೆಸರು ಹಾಗೂ ಪ್ರಶಂಸನೀಯ ಕಾರ್ಯ ಮಾಡಿದ್ದಕ್ಕೆ ಇಂಡಿ ಕಂದಾಯ ಉಪ ವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರಿಗೆ ಜಿಲ್ಲಾ ಅಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಟಿ ಭೂಬಾಲನ್ ಅಭಿನಂದನಾ ಪ್ರಮಾಣ ಪತ್ರ ನೀಡಿ ಸನ್ಮಾನಿಸಿ ಗೌರವಿಸಿದರು.
2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಮೇ. 7 ರಂದು ಜರುಗಿದ ಮತದಾನ ಹಾಗೂ ಜೂ. 04 ರಂದು ನಡೆದ ಮತ ಎಣಿಕೆ ಕಾರ್ಯಗಳಲ್ಲಿ ಸಕ್ರಿಯಾಗಿ ತೊಡಗಿಕೊಂಡು ಚುನಾವಣೆಯ ಎಲ್ಲಾ ಕೆಲಸ ಕಾರ್ಯಗಳನ್ನು ನಿಯಮಬದ್ಧವಾಗಿ, ಅಚ್ಚುಕಟ್ಟಾಗಿ ಹಾಗೂ ನಿಷ್ಪಕ್ಷಪಾತವಾಗಿ ಕೆಲಸ ನಿರ್ವಹಿಸಿ ಜಿಲ್ಲಾ ಆಡಳಿತಕ್ಕೆ ಒಳ್ಳೆಯ ಹೆಸರು ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಿರಿ. ನಿಮ್ಮ ಕಾರ್ಯವೈಖರಿಗೆ ಅಭಿನಂದನೀಯ ಮತ್ತು ಜಿಲ್ಲಾ ಆಡಳಿತವು ನಿಮ್ಮ ಕಾರ್ಯ ಗುರುತಿಸಿ ಅಭಿನಂದನಾ ಪತ್ರ ನೀಡಿದೆ ಎಂದು ತಿಳಿಸಿದರು.
ಇನ್ನೂ ಇದೆ ಸಂದರ್ಭದಲ್ಲಿ ಸುಗಮ ಹಾಗೂ ಯಶಸ್ವಿ ಚುನಾವಣೆ ನಡೆಸಲು ಸಹಕರಿಸಿದ ಎಲ್ಲ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖಾ ಅಧಿಕಾರಿ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಕಾಲಕಾಲಕ್ಕೆ ವ್ಯಾಪಕ ಪ್ರಚಾರ ನೀಡಿ ಸಹಕರಿಸಿದ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ಟಿ ಭೂಬಾಲನ್ ಅಭಿನಂದನೆ ಸಲ್ಲಿಸಿದರು.