ಇಂದಿನಿಂದ SSLC ಪರೀಕ್ಷೆ – 2 : 144 ಸೆಕ್ಷನ್ ಜಾರಿ
ವಿಜಯಪುರ,: ಎಸ್ಎಸ್ಎಲ್ಸಿ ಪರೀಕ್ಷೆ – 2 ಜೂನ್ 14 ರಿಂದ 22 ರವರೆಗೆ ನಡೆಯಲಿದ್ದು, ಒಟ್ಟು 26 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯನ್ನು ಸುಗಮವಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶಿಸಿದ್ದಾರೆ.
ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಕೇಂದ್ರ ಮುಚ್ಚುವಂತೆ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಯಾವುದೇ ಅಧಿಕಾರಿ ಅಥವಾ. ಸಿಬ್ಬಂದಿ ಮೊಬೈಲ್ ಪೋನ್ ತರುವುದನ್ನು ಹಾಗೂ ಬಳಸುವುದನ್ನು ನೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.