ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮೀಷನರ್ ಆಗಿ ಎನ್ ಶಶಿಕುಮಾರ್
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮೀಷನರ್ ಆಗಿ ಎನ್ ಶಶಿಕುಮಾರ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಮಹಾನಿಂಗ ನಂದಗಾವಿ ಅಧಿಕಾರ ಸ್ವೀಕಾರ ಮಾಡಿದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಭಾರಿ ಬದಲಾವಣೆಯಾಗಿದ್ದು, ಸರ್ಕಾರ ಹು-ಧಾ ಪೊಲೀಸ್ ಕಮೀಷನರ್ ಹಾಗೂ ಕಾನೂನು ಸುವ್ಯವಸ್ಥೆ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಆ ಸ್ಥಾನಗಳಿಗೆ ನೂತನವಾಗಿ ನೇಮಕವಾದ ಅಧಿಕಾರಿಗಳು ಅಧಿಕಾರ ಸ್ವೀಕಾರ ಮಾಡಿಕೊಂಡರು. ಒತ್ತಡಕ್ಕೆ ಮಣಿಯಲ್ಲ, ಕಾನೂನು ಸಲಹೆಯೇ ಅಂತಿಮ.


















