• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜನರ ಜೀವನ ಮಟ್ಟ ಸುಧಾರಿಸುವ ಅಭಿಯಾನಕ್ಕೆ ಚಾಲನೆ ಸಂಪೂರ್ಣತಾ ಅಭಿಯಾನ ಯಶಸ್ವಿಗೆ ಶ್ರಮಿಸೋಣ : ಜಿಲ್ಲಾಧಿಕಾರಿ ಕರೆ

      Voice of janata

      July 6, 2024
      0
      ಜನರ ಜೀವನ ಮಟ್ಟ ಸುಧಾರಿಸುವ ಅಭಿಯಾನಕ್ಕೆ ಚಾಲನೆ ಸಂಪೂರ್ಣತಾ ಅಭಿಯಾನ ಯಶಸ್ವಿಗೆ ಶ್ರಮಿಸೋಣ : ಜಿಲ್ಲಾಧಿಕಾರಿ ಕರೆ
      0
      SHARES
      135
      VIEWS
      Share on FacebookShare on TwitterShare on whatsappShare on telegramShare on Mail

      ಜನರ ಜೀವನ ಮಟ್ಟ ಸುಧಾರಿಸುವ ಅಭಿಯಾನಕ್ಕೆ ಚಾಲನೆ
      ಸಂಪೂರ್ಣತಾ ಅಭಿಯಾನ ಯಶಸ್ವಿಗೆ ಶ್ರಮಿಸೋಣ : ಜಿಲ್ಲಾಧಿಕಾರಿ ಕರೆ

      ವಿಜಯಪುರ, ಜುಲೈ 05 : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ “ಮಹತ್ವಾಕಾಂಕ್ಷಿ ತಾಲೂಕು ಕಾರ್ಯಕ್ರಮ”ದಡಿ “ಸಂಪೂರ್ಣತಾ ಅಭಿಯಾನ ಉತ್ಸವ” ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ತಾಲೂಕಾ ಮಟ್ಟದಲ್ಲಿನ ಜನರ ಜೀವನ ಮಟ್ಟ ಸುಧಾರಿಸಲು ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.
      ಈ ಯೋಜನೆಯಡಿ ರಾಜ್ಯದಲ್ಲಿ ಒಟ್ಟು 14 ತಾಲ್ಲೂಕುಗಳನ್ನು ಗುರುತಿಸಿದ್ದು, ಇದರಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕನ್ನು ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರದಂದು ತಾಳಿಕೋಟೆ ಪಟ್ಟಣದ ಸಂಗಮೇಶ್ವರ ಸಭಾಭವನದಲ್ಲಿ ನೀತಿ ಆಯೋಗ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ವಿಜಯಪುರ ಮತ್ತು ತಾಲೂಕು ಆಡಳಿತ, ತಾಲೂಕು ಪಂಚಾಯತಿ ತಾಳಿಕೋಟಿ ಇವರ ಸಹಯೋಗದೊಂದಿಗೆ ಆಯೋಜಿಸಿದ್ದ “ಮಹತ್ವಾಕಾಂಕ್ಷಿ ತಾಲೂಕು ಕಾರ್ಯಕ್ರಮ”ದಡಿ “ಸಂಪೂರ್ಣತಾ ಅಭಿಯಾನ ಉತ್ಸವ”ಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.
      ಆಯ್ಕೆಯಾದ ತಾಲ್ಲೂಕಿನಲ್ಲಿ ಜನರ ಜೀವನ ಮಟ್ಟವನ್ನು ಸುಧಾರಿಸಲು ಪ್ರಮುಖ ಸೇವಾ ವಲಯಗಳಾದ ಆರೋಗ್ಯ, ಪೌಷ್ಠಿಕತೆ, ಶಿಕ್ಷಣ, ಕುಡಿಯುವ ನೀರು ಮತ್ತು ನೈರ್ಮಲ್ಯ, ಕೃಷಿ, ಜಲ ಸಂಪನ್ಮೂಲಗಳು, ಆರ್ಥಿಕ ಸೇರ್ಪಡೆ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಿ ಮೇಲಿನ ಎಲ್ಲಾ ವಲಯಗಳಲ್ಲಿ 2 ವರ್ಷಗಳ ಅವಧಿಯಲ್ಲಿ ರಾಜ್ಯ ಮಟ್ಟದ ಸರಾಸರಿ ಅಭಿವೃದ್ಧಿ ಸೂಚ್ಯಾಂಕಗಳಿಗೆ ಸರಿ ಸಮನಾಗಿ ಪ್ರಗತಿಯನ್ನು ಸಾಧಿಸಿ, ಸೂಚ್ಯಾಂಕಗಳ ಸುಸ್ಥಿರತೆಯನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಲಾಗಿದೆ. ಜುಲೈ 4 ರಿಂದ ಸೆಪ್ಟೆಂಬರ್ 30 ವರೆಗೆ ಈ ಅಭಿಯಾನವು ನಡೆಯಲಿದೆ ಎಂದು ಹೇಳಿದರು.

      ಭಾರತ ಸರ್ಕಾರದ ನೀತಿ ಆಯೋಗದವರು ಮಹತ್ವಾಕಾಂಕ್ಷಿ ಜಿಲ್ಲೆಗಳ ಕಾರ್ಯಕ್ರಮದ ಯಶಸ್ಸಿನ ಆಧಾರದನ್ವಯ ದೇಶದಲ್ಲಿ 39 ಬಹು ಆಯಾಮದ ಸೂಚ್ಯಾಂಕಗಳಲ್ಲಿ ರಾಜ್ಯ ಮತ್ತು ಕೇಂದ್ರ ಮಟ್ಟದ ಸರಾಸರಿ ಅಭಿವೃದ್ಧಿಗಿಂತ ಕಡಿಮೆ ಇರುವ 500 ತಾಲ್ಲೂಕುಗಳನ್ನು ಮಹತ್ವಾಕಾಂಕ್ಷಿ ತಾಲ್ಲೂಕುಗಳೆಂದು ಆಯ್ಕೆ ಮಾಡಿರುತ್ತಾರೆ. ಮಹತ್ವಾಕಾಂಕ್ಷೆಯ ತಾಲೂಕಿನಲ್ಲಿ ಆರು ಪ್ರಮುಖ ಕಾರ್ಯಕ್ಷಮತೆ ಸೂಚಕಗಳಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸುವ ಗುರಿಯನ್ನು ಹೊಂದಿದೆ. ಇದು ಮುಂದಿನ 90 ದಿನಗಳಲ್ಲಿ ವ್ಯಾಪಕ ಪ್ರಚಾರ ನೀಡಿ ನಿಗದಿತ ಗುರಿ ಸಾಧಿಸಲು ನಾವೆಲ್ಲರೂ ಶ್ರಮಿಸೋಣ ಎಂದು ಅವರು ಹೇಳಿದರು.

      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ನೀತಿ ಆಯೋಗದಡಿ ಜಿಲ್ಲೆಯ ತಾಳಿಕೋಟೆ ತಾಲೂಕನ್ನು ಮಹತ್ವಾಕಾಂಕ್ಷಿ ತಾಲೂಕು ಎಂದು ಆಯ್ಕೆಮಾಡಲಾಗಿದೆ. ಸದ್ಯ ಆಯ್ಕೆ ಮಾಡಲಾದ ಜನರ ಜೀವನ ಮಟ್ಟವನ್ನು ಸುಧಾರಿಸಲು ಪ್ರಮುಖ ಸೇವಾ ವಲಯಗಳಾದ ಆರೋಗ್ಯ, ಶಿಕ್ಷಣ, ಮೂಲಸೌಲಭ್ಯ, ಸಾಮಾಜಿಕ ಅಭಿವೃದ್ಧಿ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆ ತರುವ ಮೂಲಕ ಜನರ ಜೀವನಮಟ್ಟ ಎತ್ತರಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ತಾಲೂಕಿನಲ್ಲಿ 6 ಪ್ರಮುಖ ಸೂಚಕಗಳ ಸಂಪೂರ್ಣತೆಯನ್ನು ಸಾಧಿಸಲು ಸುಸ್ಥಿರ ಪ್ರಯತ್ನ ಕೈಗೊಳ್ಳಲು ನೀತಿ ಆಯೋಗವು, ಇಂದಿನಿಂದ 3 ತಿಂಗಳ ಕಾಲ ಸಂಪೂರ್ಣತಾ ಅಭಿಯಾನ ಹಮ್ಮಿಕೊಂಡಿದೆ ಎಂದು ಹೇಳಿದರು.

      ಪ್ರಸವಪೂರ್ವ ಆರೈಕೆ ನೋಂದಣಿ, ಮಧುಮೇಹ ತಪಾಸಣೆ, ಅಧಿಕ ರಕ್ತದೊತ್ತಡ ಸ್ಕ್ರೀನಿಂಗ್ , ಪೂರಕ ಪೆÇೀಷಣೆ, ಮಣ್ಣಿನ ಆರೋಗ್ಯ ಪರೀಕ್ಷೆ ಹಾಗೂ ಸ್ವಸಹಾಯ ಗುಂಪುಗಳಿಗೆ ಆವರ್ತ ನಿಧಿ ನೀಡುವ ಮೂಲಕ ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳು ಶ್ರಮಿಸಬೇಕು ಮತ್ತು ತಾಲೂಕಿನಲ್ಲಿ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಸಂಪೂರ್ಣತಾ ಅಭಿಯಾನದಲ್ಲಿನ ಎಲ್ಲಾ ಸೂಚ್ಯಾಂಕಗಳಲ್ಲಿ ಪೂರ್ಣ ಪ್ರಗತಿಯನ್ನು ಸಾಧಿಸಬೇಕು ಎಂದು ಅವರು ಹೇಳಿದರು.
      ಕಾರ್ಯಕ್ರಮದಲ್ಲಿ 10 ಜನ ಗರ್ಭಿಣಿ ಮಹಿಳೆಯರಿಗೆ ತಾಯಿ ಕಾರ್ಡ್ , 5 ಜನ ಮೇಲ್ವಿಚಾರಕರಿಗೆ ಪೆÇೀಷಣ್ ಟ್ರ್ಯಾಕರ್ ಮೊಬೈಲ್, 5 ಫಲಾನುಭವಿಗಳಿಗೆ ಸುಕನ್ಯಾ ಸಮೃದ್ದಿ ಯೋಜನೆಯ ಪಾಸ್ ಬುಕ್ ಹಾಗೂ 20 ಜನ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್ ವಿತರಣೆ ಮಾಡಲಾಯಿತು. ಇದೇ ವೇಳೆ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನೂ ಸಹ ನೆರವೇರಿಸಲಾಯಿತು.

      ಕಾರ್ಯಕ್ರಮದಲ್ಲಿ ಗಮನ ಸೆಳೆದ ವಸ್ತು ಪ್ರದರ್ಶನ ಮಳಿಗೆಗಳು : ಜಲ ಜೀವನ ಮಿಷನ್, ತೋಟಗಾರಿಕೆ ಇಲಾಖೆ, ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಸ್ವ ಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳು ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆಯ ಮಾಹಿತಿಯುಳ್ಳ ಮಾಹಿತಿ ಕೇಂದ್ರ ಹೀಗೆ ವಿವಿಧ ಇಲಾಖೆಗಳ ಸಹಕಾರದಲ್ಲಿ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನ ಮಳಿಗೆಗಳು ಎಲ್ಲರ ಗಮನ ಸೆಳೆದವು.

      ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು ಮತ್ತು ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ. ಬಿ. ಅಲ್ಲಾಪೂರ ಅವರು ಸಂಪೂರ್ಣತಾ ಅಭಿಯಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ತಾಳಿಕೋಟಿ ಪಟ್ಟಣದ ಬಸವೇಶ್ವರ ಸರ್ಕಲ್ ನಿಂದ ಸಂಗಮೇಶ್ವರ ಕಲ್ಯಾಣ ಮಂಟಪದವರೆಗೆ ಸಂಪೂರ್ಣತಾ ಅಭಿಯಾನ ಜಾಗೃತಿ ಜಾಥಾ ಅತೀ ವಿಜೃಂಭಣೆಯಿಂದ ಜರುಗಿತು.

      ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿ.ಪಂ. ಯೋಜನಾ ನಿರ್ದೇಶಕರಾದ ಸಿ. ಬಿ. ದೇವರಮನಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಸಿ. ಬಿ ಕುಂಬಾರ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿಗಳಾದ ಎ. ಬಿ. ಅಲ್ಲಾಪೂರ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ. ಆರ್. ಬಿರಾದಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಎನ್. ಎಚ್. ನಾಗೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ.ಕೆ ಚವ್ಹಾಣ, ಕೃಷಿ ಇಲಾಖೆಯ ಜಂಟಿನಿರ್ದೇಶಕರಾದ ರಾಜಶೇಖರ ವಿಲಿಯಮ್ಸ್, ಜಿಲ್ಲಾ ಮಟ್ಟದ ಮೀನುಗಾರಿಕೆ ಅಧಿಕಾರಿಗಳಾದ ಅನ್ನಪ್ಪಸ್ವಾಮಿ, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕರಾದ ಡಾ. ಘೊಣಸಗಿ, ತಹಶೀಲ್ದಾರರಾದ ಪ್ರೇಮಸಿಂಗ ಪವಾರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ ಲಮಾಣಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಾವಳಗಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಕುಂಬಾರ, ತಾಲೂಕು ಆರೋಗ್ಯ ಅಧಿಕಾರಿಗಳಾದ ಸತೀಶ ತಿವಾರಿ, ತಮದಡ್ಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಹೇಶ ಮಡಿವಾಳರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಹಿರೇಗೌಡರ, ಹಿರೂರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಿ. ಎಸ್. ಮಠ, ಕೊಡಗಾನೂರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅನಿಲಕುಮಾರ ಕೀರಣಗಿ, ಜಿಲ್ಲಾ, ತಾಲೂಕು, ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳು, ಸಿಬ್ಬಂದಿಯವರು, ಸರ್ವ ಸದಸ್ಯರು, ಗರ್ಭಿಣಿಯರು, ಆಶಾಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪ್ರಗತಿಪರ ರೈತರು ಹಾಗೂ ಇತರರು ಉಪಸ್ಥಿತರಿದ್ದರು.

      ನೀತಿ ಆಯೋಗದ ಅಧಿಕಾರಿಗಳಿಂದ ಪರಿಶೀಲನೆ : ತಾಳಿಕೋಟಿ ತಾಲೂಕಿಗೆ ಇಂದು ಮಹತ್ವಾಕಾಂಕ್ಷಿ ತಾಲ್ಲೂಕು ಕಾರ್ಯಮದಡಿ ಸಂಪೂರ್ಣತಾ ಅಭಿಯಾನದ ಉತ್ಸವ ಕಾರ್ಯಕ್ರಮದ ನಿಮಿತ್ಯ ಜಿಲ್ಲೆಗೆ ಆಗಮಿಸಿರುವ ನೀತಿ ಆಯೋಗದ ಅಧಿಕಾರಿಗಳು “ಸಂಪೂರ್ಣತಾ ಅಭಿಯಾನ ಉತ್ಸವ”ದ ಕಾರ್ಯಕ್ರಮದಡಿ ಇರುವ ಸೂಚ್ಯಾಂಕಗಳಿಗೆ ಸಂಬಂಧಿಸಿದಂತೆ ಹಿರೂರ ಗ್ರಾಮ ಪಂಚಾಯತಿ, ತಾಳಿಕೋಟೆ ಪಟ್ಟಣದ ಪಶು ಆಸ್ಪತ್ರೆ ಆಸ್ಪತ್ರೆ, ತಮದಡ್ಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು.

      ಬಳಿಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು, ಕೊಡಗಾನೂರ ಗ್ರಾಮ ಪಂಚಾಯತಿಯಲ್ಲಿ ಬಿ.ಎಸ್.ಎನ್. ಎಲ್ ಸಂಪರ್ಕ ವ್ಯವಸ್ಥೆ ಹಾಗೂ ತಮದಡ್ಡಿ ಗ್ರಾಮದ ಜಲ ಜೀವನ ಮಿಷನ್ ಯೋಜನೆಯಡಿ ನಿರ್ಮಿಸಿದ ಕಾಮಗಾರಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      April 18, 2026
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.