ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಅರ್ಜಿ ಸಲ್ಲಿಕೆ ಆರಂಭ
ಇಂಡಿ: 2024-25 ನೇ ಸಾಲಿನ ಸೆಪ್ಟೆಂಬರ್ 5, ಶಿಕ್ಷಕರ ದಿನಾಚರಣೆಯ ಪ್ರಯುಕ್ತ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯದ ವತಿಯಿಂದ ‘ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ’ಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಶಿಕ್ಷಕರು ದಿ:05-08-2024 ರ ಸಂಜೆ 4 ಗಂಟೆಯೊಳಗೆ ಕಾರ್ಯಾಲಯಕ್ಕೆ 3 ಪ್ರತಿಗಳಲ್ಲಿ ಪ್ರಸ್ತಾವನೆಗಳನ್ನು ಸಲ್ಲಿಸಲು ತಿಳಿಸಿದೆ. ಸರಕಾರಿ ಮತ್ತು ಅನುದಾನಿತ ಕಿರಿಯ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿಭಾಗದಿಂದ ಪ್ರತ್ಯೇಕವಾಗಿ ಅರ್ಜಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ
ಶಿಕ್ಷಣ ಸಂಯೋಜಕರಾದ ಮಹೇಶ ಬಿ ಡೇಂಬ್ರೆ ಅವರನ್ನು (9916609045) ಸಂಪರ್ಕಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಟಿ ಎಸ್ ಆಲಗೂರ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀ ಎಸ್ ಆರ್ ನಡುಗಡ್ಡಿ ತಿಳಿಸಿದ್ದಾರೆ.


















