ಇಂಡಿ : ತಾಲೂಕು ಆಡಳಿತ ಆಶ್ರಯದಲ್ಲಿ 73ನೇ ಗಣರಾಜ್ಯೋತ್ಸವದ ನಿಂಬೆ ನಾಡಿನ ತಾಲೂಕ ಕ್ರೀಡಾಂಗಣದಲ್ಲಿ ರಾಹುಲ್ ಶಿಂಧೆ ಕಂದಾಯ ಉಪವಿಭಾಗಾಧಿಕಾರಿಗಳು ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದ ಘನ ಅಧ್ಯಕ್ಷತೆ ಮತಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ವಹಿಸಿಕೊಂಡು ಕಾರ್ಯಕ್ರಮ ವನ್ನುದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಅಧ್ಯಕ್ಷ ಅಣ್ಣಪ್ಪ ಬಿದರಕೋಟೆ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ,ಸಂಜಯ ಕಡಗೇಖರ, ತಹಶಿಲ್ದಾರ ಚಿದಾನಂದ ಕುಲಕರ್ಣಿ, DYSP ಶ್ರೀಧರ ದೊಡ್ಡಿ, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಜಿಲ್ಲಾ ಪಂಚಾಯತ ಮಾಜಿ ಸದಸ್ಯರು, ತಾಲೂಕಾ ಪಂಚಾಯತ ಮಾಜಿ ಸದಸ್ಯರು, ಪುರಸಭೆ ಸದಸ್ಯರು ಮುಂತಾದವರು ಭಾಗವಹಿಸಿದ್ದರು.