ಹನೂರು ಪಟ್ಟಣದಲ್ಲಿ ವಿಜೃಂಭಣೆಯಿಂದ ನಡೆದ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ
ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ವಿಜೃಂಭಣೆಯ 78 ನೇ ಸ್ವಾತಂತ್ರೋತ್ಸವ
ಹನೂರು : ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಸಕ ಎಂ ಆರ್ ಮಂಜುನಾಥ್ ಅವರು ಕಾರ್ಯಕ್ರಮ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.
ತಹಸೀಲ್ದಾರ್ ವೈ ಕೆ ಗ್ರೂಪ್ ಪ್ರಸಾದ್ ರವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ವಿವಿಧ ಶಾಲೆ ಮಕ್ಕಳಿಂದ ಪಥ ಸಂಚಲನ ವನ್ನು ನಡೆಸಲಾಯಿತು. ಎಂ ಆರ್ ಮಂಜುನಾಥ್ ಮಾತನಾಡಿ 78ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವುದು ಸಂತೋಷವಾಗಿದೆ. ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರು, ರೈತ ಹೋರಾಟಗಾರರಿಂದ ನಮಗೆ ಸ್ವಾತಂತ್ರ್ಯ ಲಭಿಸಿದೆ. ಸ್ವತಂತ್ರ ನಂತರ ದೇಶ ಕಟ್ಟುವ ಕೆಲಸ ಸುಲಭವಾಗಿರಲಿಲ್ಲ. ಭಾರತದಲ್ಲಿ ಭೌಗೋಳಿಕವಾಗಿ ಆಚಾರ ವಿಚಾರ ವಿವಿಧತೆಯಲ್ಲಿ ಏಕತೆಯನ್ನು ಒಳಗೊಂಡಿದೆ. ಭಾರತದ ಸ್ವತಂತ್ರಗೋಸ್ಕರ ಹಲವಾರು ಮಹನೀಯರು ಬಲಿದಾನವಾಗಿದೆ. ವಿಶ್ವದ ಅತ್ಯಂತ ವಿಸ್ತಾರವಾದ ದೊಡ್ಡ ಸಂವಿಧಾನವನ್ನು ಡಾಕ್ಟರ್ ಅಂಬೇಡ್ಕರ್ ನೀಡಿದ್ದಾರೆ. ಯುವ ಸಮೂಹ ನಾಲ್ಕು ಜನರಿಗೆ ಮಾದರಿ ಆಗುವ ರೀತಿಯಲ್ಲಿ ವಾತಾವರಣವನ್ನು ಸೃಷ್ಟಿ ಮಾಡಬೇಕಾಗಿದೆ ಎಂದು ತಿಳಿಸಿದರು.
ಶಾಲಾ ಮಕ್ಕಳಿಂದ ನೃತ್ಯ : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜನೆ ಮಾಡಲಾಗಿದ್ದ ನೃತ್ಯ ಕಾರ್ಯಕ್ರಮದಲ್ಲಿ ವಿವಿಧ ಶಾಲಾ ಮಕ್ಕಳಿಂದ ದೇಶ ಭಕ್ತಿ ಸಾರುವ ಹಾಡಿಗೆ ಹೆಜ್ಜೆ ಹಾಕುವ ನೃತ್ಯ ಹಾಗೂ ನಾಟಕ ಪ್ರದರ್ಶನ ಮಾಡಿದರು.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಲ್ಯಾಪ್ ಟಾಪ್ ಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ್ ವೈ ಕೆ ಗುರು ಪ್ರಸಾದ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಅಶೋಕ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಪೊಲೀಸ್ ಇನ್ಸ್ಪೆಕ್ಟರ್ ಶಶಿ ಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಬಿಂದ್ಯ ,ಪಟ್ಟಣ ಪಂಚಾಯತಿ ಸದಸ್ಯರಾದ ಆನಂದ್ ಕುಮಾರ್, ಹರೀಶ್ ಕುಮಾರ್, ಸಂಪತ್, ಸೋಮಶೇಖರ್ ಮಹೇಶ್ ನಾಯ್ಕ್,, ರೂಪ, ಮಾಮ ತಾಜ್ ಬಾನು, ಮಂಜುಳಾ ಪವಿತ್ರ, ಹಾಗೂ ಗ್ರಾಮ ಲೆಕ್ಕಿಗ ಶೇಷಣ್ಣ, ಸೇರಿದಂತೆ ವಿವಿಧ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಕಂದಾಯ ಇಲಾಖೆ ಸಿಬ್ಬಂದಿ ಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.