ಹನೂರು ಪಟ್ಟಣ ಪಂಚಾಯಿತಿ ಮೊದಲ ಬಾರಿ ಜೆಡಿಎಸ್ ತೆಕ್ಕೆಗೆ
ಹನೂರು: ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಮುಮ್ತಾಜ್ ಬಾನು ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆಯಾದರು.
ಹನೂರು ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದನೇ ವಾರ್ಡಿನ ಮಮ್ತಾಜ್ ಭಾನು ರವರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಇವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾದರು.
ಉಪಾಧ್ಯಕ್ಷ ಸ್ಥಾನಕ್ಕೆ ಜಾ.ದಳದ ಎಂಟನೇ ವಾರ್ಡಿನ ಸದಸ್ಯ ಆನಂದ್ ಕುಮಾರ್ ಹಾಗೂ ಎರಡನೇ ವಾರ್ಡಿನ ಕಾಂಗ್ರೆಸ್ ಸದಸ್ಯ ಸುದೇಶ್ ರವರು ನಾಮಪತ್ರ ಸಲ್ಲಿಸಿದ್ದರು. ಆನಂದ್ ರವರಿಗೆ ಶಾಸಕ ಎಂಆರ್ ಮಂಜುನಾಥ್ ಬಿಜೆಪಿ ಸದಸ್ಯೆ ರೂಪ, ಜೆಡಿಎಸ್ ಪಕ್ಷದ 6 ಸದಸ್ಯರು ಸೇರಿದಂತೆ 8 ಎಂಟು ಮತಗಳು, ಸುದೇಶ್ ರವರಿಗೆ ಕಾಂಗ್ರೆಸ್ ಪಕ್ಷದ ಐದು ಮತಗಳು ಬಂದಿದ್ದು, 03 ಮತಗಳ ಅಂತರದಿಂದ ಆನಂದ್ ರವರು ಜಯಗಳಿಸಿದರು. ಅಂತಿಮವಾಗಿ ಅಧ್ಯಕ್ಷರಾಗಿ ಮಮ್ತಾಜ್ ಬಾನು, ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಹಸಿಲ್ದಾರ್ ಗುರುಪ್ರಸಾದ್ ಘೋಷಣೆ ಮಾಡಿದರು.
ಎಂ ಆರ್ ಮಂಜುನಾಥ್ ರವರು ಮಾತನಾಡಿ ಇದೇ ಮೊದಲ ಬಾರಿಗೆ ಹನೂರು ಪಟ್ಟಣ ಪಂಚಾಯತಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ನಮ್ಮ ಪಕ್ಷದ ಅಭ್ಯರ್ಥಿಗಳು ಜಯಶೀಲರಾಗಿದ್ದಾರೆ, ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಈ ಗೆಲುವನ್ನು ಸುವರ್ಣಾಕ್ಷರದಲ್ಲಿ ಬರೆಯುವಂತ ದಿನವಾಗಿದೆ. ಈ ಗೆಲುವನ್ನು ಕ್ಷೇತ್ರದ ಜನತೆಗೆ ಅರ್ಪಿಸುತ್ತೇನೆ. ಪಂಚಾಯಿತಿಯ ಪೂರ್ಣ ಅಭಿವೃದ್ಧಿಗೆ ಎಲ್ಲರೂ ಶ್ರಮವಹಿಸಿ ಕೆಲಸವನ್ನು ಮಾಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ಆರ್ ಅಶೋಕ್, ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು, ಜೆಡಿಎಸ್ ಮುಖಂಡರುಗಳು ಹಾಜರಿದ್ದರು.
ವರದಿ :ಚೇತನ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ