ಗೋವಾ: ಪಂಚರಾಜ್ಯಗಳ ಚುನಾವಣೆ ಹಿನ್ನಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಗೋವಾದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರವಿತ್ತು ಎಂಬ ಹೇಳಿಗೆ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಗೋವಾ ಜನತೆ ಭೂತದ ಬಾಯಿಯಲ್ಲಿ ಭಗವದ್ಗಿತೆ ಪಾಠ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ. ಡಿಕೆಶಿ ಬಾಯಿಯಲ್ಲಿ ಬರುವ ಭ್ರಷ್ಟಾಚಾರದ ಮಾತಿಗೂ ಯಾವುದೇ ವ್ಯತ್ಯಾಸ ಇಲ್ಲ. ಅಲ್ಲದೆ ಡಿಕೆಶಿ ಯವರು ಭ್ರಷ್ಟಾಚಾರದ ಪ್ರಕರಣದಲ್ಲಿ ಜೈಲಿಗೆ ಹೋಗಿ ಬೇಲ್ ಮೇಲೆ ಇದ್ದಾರೆ ಎಂದು ಗೋವಾದ ಪಣಜಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.