ರಾಯಚೂರು: ಕೊರೊನ ಹಿನ್ನಲೆ ಫೆ.1 ರಂದು ಮಡಿವಾಳ ಮಾಚಿದೇವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತದೆ ಎಂದು ಸಮಾಜದ ಮುಖಂಡ ಜಂಬಣ್ಣ ಎಕ್ಲಾಸಪೂರ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಪ್ರತಿವರ್ಷ ಮಡಿವಾಳ ಮಾಚಿದೇವರ ಜಯಂತಿಯನ್ನು ಅದ್ದೂರಿಯಾಗಿ ಮಾಡಲಾಗುತಿತ್ತು. ಆದರೆ ಕೊರೊನ ಹಿನ್ನಲೆ ವೇದಿಕೆ ಕಾರ್ಯಕ್ರಮ ಹಾಗೂ ಮೆರವಣಿಗೆಯನ್ನು ರದ್ದು ಪಡಿಸಲಾಗಿದೆ.ಆದ್ದರಿಂದ ಈ ವರ್ಷ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಆದ್ದರಿಂದ ಸಮಾಜದ ಮುಖಂಡರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಮಡಿವಾಳ ಮಾಚಿದೇವರ ಜಯಂತಿಯನ್ನು ತಮ್ಮ ತಮ್ಮ ಮನೆಗಳಲ್ಲಿಯೇ ಆಚರಣೆ ಮಾಡಿಕೊಳ್ಳಲಿ. ಜಯಂತಿಯನ್ನು ಸಾಂಕೇತಿಕವಾಗಿ ಮಾಡೋಣ. ದೊಡ್ಡ ಕಾರ್ಯಕ್ರಮ ಮಾಡುವುದು ಬೇಡ. ಕೊರೊನ ಕಡಿಮೆಯಾದಾಗ ಮುಂದಿನ ದಿನಗಳಲ್ಲಿ ಅದ್ಧೂರಿ ಆಚರಣೆ ಮಾಡಿಕೊಳ್ಳೋಣ ಸಮಾಜದ ಮುಖಂಡರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸುರೇಶ್, ಹುಸೇನಪ್ಪ,ಮುನಿಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.