ಇಂಡಿ: ಬೀದರ್ ಜಿಲ್ಲೆಯ ಹುಮ್ನಾಬಾದ ತಾಲೂಕಿನ ತಹಶೀಲ್ದಾರರಾದ ಡಾ: ಪ್ರದೀಪ ಹಿರೇಮಠ ಅವರು ಕಛೇರಿ ಕೆಲಸ ನಿರ್ವಹಿಸುತ್ತಿರುವ ಸಮಯದಲ್ಲಿ ಕೆಲವು ವ್ಯಕ್ತಿಗಳು ಕಛೇರಿಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ತಹಶೀಲ್ದಾರರ ಮೇಲೆ ದೈಹಿಕವಾಗಿ ಹಲ್ಯೆ ಮಾಡಿ ಸರಕಾರಿ ಕೆಲಸಕ್ಕೆ ಅಡಚಣೆ ಉಂಟು ಮಾಡಿರುತ್ತಾರೆ. ಈ ಕೃತ್ಯವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇಂಡಿ ತಾಲೂಕು ಶಾಖೆಯು ತೀವ್ರವಾಗಿ ಖಂಡಿಸುತ್ತದೆ.
ಸರ್ಕಾರಿ ನೌಕರರು/ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಇಂತಹ ಘಟನೆಗಳು ಪದೆ ಪದೆ ಸಂಭವಿಸುತ್ತಿದ್ದು, ಸರ್ಕಾರಿ ನೌಕರರು ಭಯದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುವ ಸಂದಿಗ್ಧ ಪರಿಸ್ಥಿತಿ ಉದ್ಭವವಾಗುತ್ತಿದೆ. ಸರ್ಕಾರ ಕೂಡಲೆ ತಪ್ಪಿತಸ್ಥರನ್ನು ಬಂಧಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲು ಸಂಘವು ಈ ಮೂಲಕ ಆಗ್ರಹಪಡಿಸುತ್ತದೆ. ಸರ್ಕಾರವು ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ತಹಶೀಲ್ದಾರರಿಗೆ ರಾಜ್ಯ ಸರ್ಕಾರಿ ನೌಕರರು ಮನವಿ ಸಲ್ಲಿಸಿದರು.