ಇಂಡಿ : ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವ ನ್ಯಾಯಾಧೀಶ ವಿರುದ್ಧ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಅಂಬೇಡ್ಕರ್ ಯುವಕ ಮಂಡಳಿ ವತಿಯಿಂದ ಪಂಜಿನ ಮೆರವಣಿಗೆ ನಡೆಸಿದರು.
ಇನ್ನು ಸರ್ಕಾರ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರ ಮೇಲೆ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅಂಬೇಡ್ಕರ್‌ಗೆ ಅವಮಾನ ಮಾಡಿದ್ದು ಖಂಡನೀಯ. ಅದಕ್ಕಾಗಿ ಅವರನ್ನು ಕೆಲಸದಿಂದ ವಜಾ ಮಾಡುಬೇಕು. ಅಲ್ಲದೇ, ಇಂತಹ ಘಟನೆಗಳು ಮರುಕಳಿಸದಂತೆ ಕ್ರಮಕ್ಕೆ ಮುಂದಾಗಬೇಕಿದೆ ಎಂದು ಆಗ್ರಹಿಸಿದರು.